ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಡಳ್ಳಿ, ಕುಂದಾಪುರ ತಾಲೂಕು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿಯವರು ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣ ಸಮಾರಂಭವು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿಎಸ್.ಡಿ.ಎಂ.ಸಿ ಅಧ್ಯಕ್ಷರಾದ ಭಾಸ್ಕರ ನಾಯ್ಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರನಾರಾಯಣ ಭಟ್ ಕೊಂಡಳ್ಳಿ , ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಲಾಲ, ಗ್ರಾಮ ಪಂಚಾಯತ್ ಸದಸ್ಯ ಗುರುದತ್ ಶೇಟ್, ಶಂಕರನಾರಾಯಣ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಹೆಗ್ಡೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಆರ್ ಶೆಟ್ಟಿ, ವರ್ಗಾವಣೆ ಹೊಂದಿದ ಮುಖ್ಯ ಶಿಕ್ಷಕ ಗೋವಿಂದ ಎಸ್, ಅಂಗನವಾಡಿ ಕಾರ್ಯಕರ್ತೆ ವಿನೋದಾ ಶೆಟ್ಟಿ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯ ಶಿಕ್ಷಕ ರಾಮ ಮೊಗವೀರ ಸ್ವಾಗತಿಸಿ, ಪ್ರಸ್ಥಾವನೆಗೈದರು. ಸಹಶಿಕ್ಷಕಿ ಸುಜಾತ ಎಚ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಭಾರತಿ ಮತ್ತು ಶಿವಾನಿ, ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











