ಕುಂದಾಪುರ ಮಿರರ್ ಸುದ್ದಿ…



ಕುಂದಾಪುರ :ಉಡುಪಿಯ ಜಿಲ್ಲಾಧಿಕಾರಿಯಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ವಿದ್ಯಾಕುಮಾರಿ ಅವರನ್ನು ಇಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಭೇಟಿ ಮಾಡಿ ಅಭಿನಂದಿಸಲಾಯಿತು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ತಂಡವು ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿದ್ಯಾಕುಮಾರಿ ಅವರನ್ನು ಶಾಲು ಹೊದಿಸಿ,ಹೂ ಗುಚ್ಛ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಡಿತರ ಚೀಟಿಯಲ್ಲಿನ ವಿವಿಧ ಸಮಸ್ಯೆಗಳು ಮತ್ತು ಗ್ರಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಎದುರಾಗುವ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಜಿಲ್ಲಾಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಆಶ್ವಾಸನೆ ನೀಡಿದರು.
ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ, , ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್,ಐಡಾ ಗಿಬ್ಬ ಡಿ’ಸೋಜ,ಚಂದ್ರಿಕಾ ಶೆಟ್ಟಿ,ಕಾರ್ಯದರ್ಶಿಗಳಾದ ಮೀನಾಕ್ಷಿ ಮಾಧವ ಬನ್ನಂಜೆ,ಶಾಂತಿ ಪಿರೇರಾ,ಜ್ಯೋತಿ ಮೆನನ್, ಆಶಾ ಚಂದ್ರಶೇಖರ್, ಬ್ಲಾಕ್ ಅಧ್ಯಕ್ಷರಾದ ಮಮತಾ ಶೆಟ್ಟಿ,ಉಡುಪಿ ಮತ್ತು ಶಾಂತಲತಾ ಶೆಟ್ಟಿ,ಕಾಪು,ಶ್ರೀಮತಿ ಲಕ್ಷ್ಮೀ ನಾಯ್ಕ್,ಜಯಶ್ರೀ ಶೇಟ್, ಸುಕನ್ಯಾ ಪೂಜಾರಿ ಕಡೇಕಾರ್, ಪ್ರಮೀಳಾ ಜತ್ತನ್ನ ,ಹಾಗೂ ಕಾಂಗ್ರೆಸ್ ಮುಖಂಡರಾದ ಕೃಷ್ಣ ಹೆಬ್ಬಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.











