ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕಾಳಾವರ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಾಂಡುರಂಗ ಶೇಟ್ (58ವ) ಅನಾರೋಗ್ಯ ಕಾರಣದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಜು.27ರಂದು ನಿಧನರಾದರು.
ಇವರು ಈ ಹಿಂದೆ ಕೆಎಸ್‍ಆರ್‍ಟಿಸಿ ನಿಗಮದ ಅಧ್ಯಕ್ಷರಾಗಿದ್ದ ಕೆ.ಗೋಪಾಲ ಪೂಜಾರಿ ಅವರ ಆಪ್ತ ಸಹಾಯಕರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.











