ಬೈಂದೂರಿಗೆ ಮೊಬೈಲ್ ಟವರ್ : ಸಂಸದರಿಂದ ಕೇಂದ್ರ ಸಚಿವರ ಭೇಟಿ

0
478

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಕೇಂದ್ರ ದೂರಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ರೈಲ್ವೇ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಆಗಸ್ಟ್ 1ರಂದು ಸಂಸದ ಬಿ.ವೈ. ರಾಘವೇಂದ್ರ ಭೇಟಿ ಮಾಡಿದರು. ಈ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಬಿ.ಎಸ್.ಎನ್.ಎಲ್ ಮೊಬೈಲ್ ಟವರ್ ಮಂಜೂರಾತಿಗೆ ಮನವಿ ಮಾಡಿದರು ಹಾಗೂ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿರುವ ಬೈಂದೂರು, ಶಿರೂರು, ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಸಂಸದರ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Click Here

LEAVE A REPLY

Please enter your comment!
Please enter your name here