ಉಪ್ಪುಂದ ದೋಣಿ ದುರಂತ: ಸಚಿವ ಮಾಂಕಾಳ್ ವೈದ್ಯ ರಿಂದ ತಲಾ 6ಲಕ್ಷ ಪರಿಹಾರದ ಚೆಕ್ ವಿತರಣೆ

0
443

Click Here

Click Here

ಕುಂದಾಪುರ ಮಿರರ್ ಸುದ್ದಿ…


ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

Click Here

ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ಚೆಕ್ ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು.
ಸಿಆರ್ಝಡ್ ಸಮಸ್ಯೆ ನಿವಾರಿಸಲು ಒಂದು ತಂಡ ರಚಿಸಲಾಗಿದ್ದು, ಮರವಂತೆ ಬಂದರು ಕಾಮಗಾರಿಯೂ ಶೀಘ್ರ ಆರಂಭವಾಗಲಿದೆ. ಎಂದರು.

ಈ ವೇಳೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮೀನುಗಾರ ಮುಖಂಡರಾದ ಮದನ್ ಕುಮಾರ್ ಉಪ್ಪುಂದ, ವೆಂಕಟರಮಣ ಖಾರ್ವಿ, ಆನಂದ ಖಾರ್ವಿ, ಜಗನ್ನಾಥ ಮೊಗವೀರ, ಪ್ರಮುಖರಾದ ಎಸ್. ರಾಜು ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ , ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here