ಸರಕಾರಿ ಪ್ರೌಢ ಶಾಲೆ ಗುಂಡ್ಮಿ ಯಕ್ಷಗಾನ ತರಗತಿಯ ಉದ್ಘಾಟನೆ

0
545

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸರಕಾರಿ ಪ್ರೌಢ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಕುಂದಾಪುರ ವಿಧಾನಸಭಾ ಶಾಸಕ ಕಿರಣ್ ಕೊಡ್ಗಿಯವರ ಆಶಯದಂತೆ ಯಕ್ಷಗಾನ ಕಲಾರಂಗ ಉಡುಪಿ ಇವರ ವತಿಯಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

Click Here

ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಸದಸ್ಯೆ ಸುಲತಾ ಹೆಗ್ಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿಗಳಾದ ಮುರಳಿ ಕಡೇಕಾರರು, ಗುಂಡ್ಮಿಯ ಯಕ್ಷಗಾನ ತಾಳಮದ್ದಲೆಯ ಅರ್ಥಧಾರಿಗಳಾದ ವೈಕುಂಠ ಹೇರ್ಳೆ , ಶಾಲಾಭಿವೃದ್ದಿ ಸಮಿತಿಯ ಗೌರವ ಸದಸ್ಯರಾದ ಗಣೇಶ್ ಚಲ್ಲಮಕ್ಕಿ, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ರಾಘವೇಂದ್ರ ಶೇರ್ವೆಗಾರ್,ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಶೆಟ್ಟಿಗಾರ್, ಹಾಗೂ ಯಕ್ಷಗಾನ ತರಬೇತಿ ಶಿಕ್ಷಕರಾದ ಮಂಜುನಾಥ ಕುಲಾಲ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಕೆ.ಸತೀಶ ಐತಾಳರು ಸ್ವಾಗತಿಸಿ, ಸಹಶಿಕ್ಷಕಿ ಹೆಲೆನ್ ಬಾಂಜ್ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕರಾದ ಪ್ರತಾಪಚಂದ್ರ ಕಿಣಿಯವರು ವಂದನಾರ್ಪಣೆಗೈದರು.

Click Here

LEAVE A REPLY

Please enter your comment!
Please enter your name here