ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಸಾಸ್ತಾನ ಗೋಳಿಬೆಟ್ಟು ಐರೋಡಿ ಸರ್ಕಾರಿ ಶಾಲೆಗೆ ಸ್ಥಳೀಯರಾದ ವೆರೋನಿಕಾ ರೊಡ್ರಿಗಸ್ ಕೊಡಮಾಡಿದ ಉತ್ತಮ ಗುಣಮಟ್ಟದ ಧ್ವನಿ ವರ್ಧಕಗಳನ್ನು ಐರೋಡಿ ಗ್ರಾಮಪಂಚಾಯತ್ ಸದಸ್ಯರಾದ ಸುಧಾಕರ ಪೂಜಾರಿ ಮತ್ತು ನವೀನ್ ಕಾರಂತ್ ಶಾಲೆಯವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.
ಅಲ್ಲದೆ ಉದ್ಯಮಿಗಳಾದ ಸುಂದರ್ ಹಂದಾಡಿ, ಕವಿತಾ ಆದರ್ಶ್ ಮತ್ತು ದೀಕ್ಷಾ ದೇವಾಡಿಗರವರ ಪ್ರಾಯೋಜಿಕತ್ವದಡಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ಟ್ರ್ಯಾಕ್ ಸೂಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೊಡುಗೆ ನೀಡಿದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‍ಡಿಎಂಸಿ ಅಧ್ಯಕ್ಷೆ ಪೂರ್ಣಿಮಾ ಸತೀಶ್ ವಹಿಸಿದ್ದರೆ, ಎಸ್‍ಡಿಎಂಸಿ ಉಪಾಧ್ಯಕ್ಷರಾದ ವಿಜಯ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಾಗೂ ಪೋಷಕರು ಮತ್ತು ಮಕ್ಕಳು ಇದ್ದರು. ಸಹ ಶಿಕ್ಷಕಿ ಭವಾನಿ ಮತ್ತು ಗೌರವ ಶಿಕ್ಷಕಿ ಅಕ್ಷತಾ ಸಹಕರಿಸಿದರು.











