ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಬಿಜೆಪಿ ಕುಂದಾಪುರದ ಮಂಡಳ ವತಿಯಿಂದ ಪಂಡೀತ್ ದೀನದಯಾಳ್ ಉಪಾಧ್ಯಾಯರ 105ನೇ ಜನ್ಮದಿನದ ಅಂಗವಾಗಿ ಇಂದು ಕುಂದಾಪುರ ಮಂಡಲ ಕಾರ್ಯಾಲಯದಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಪುಷ್ಪ ನಮನ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್ ಸ್ವಾತಂತ್ರ್ಯ ನಂತರ ಕುಟುಂಬ ರಾಜಕಾರಣದ ಪಕ್ಷವೊಂದು ಬಲಿಷ್ಠವಾಗಿ ಬೆಳೆದಿದ್ದ ಸಮಯದಲ್ಲಿ ರಾಷ್ಟ್ರೀಯತೆ, ರಾಷ್ಟ್ರಪರ ಚಿಂತನೆಯ ಪಕ್ಷವೊಂದು ಬೇಕು ಎನ್ನುವ ನೆಲೆಯಲ್ಲಿ ಜನಸಂಘ ಕಟ್ಟಿ ಅದನ್ನ ಸಂಘಟಿಸುವ ನಿಟ್ಟಿನಲ್ಲಿ ತಮ್ಮ ಬದುಕನ್ನೇ ಅರ್ಪಿಸಿದ ದೀನದಯಾಳ್ ಉಪಾಧ್ಯಾಯರ ಬದುಕು ಪ್ರಸ್ತುತ ರಾಜಕೀಯ ವ್ಯವಸ್ಥೆಗೆ ಮಾದರಿಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಉಪಾಧ್ಯಕ್ಷರಾದ ಸಂಜೀವ ದೇವಾಡಿಗ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಸುದೀರ್ ಕೆ.ಎಸ್, ನಗರ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್ ಪೂಜಾರಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶೇಖರ್, ಮಂಡಲ ಪಧಾದಿಕಾರಿಗಳು, ವಿವಿಧ ಮೋರ್ಚಾ,ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್ ಪ್ರತಿಜ್ಞಾ ವಿಧಿ ವಾಚಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ನಿರೂಪಿಸಿ, ಸುರೇಶ್ ಶೆಟ್ಟಿ ಸ್ವಾಗತಿಸಿ, ಉಪಾಧ್ಯಕ್ಷ ಸಂಜೀವ್ ದೇವಾಡಿಗ ವಂದಿಸಿದರು.












