ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ದೇಣಿಗೆ ನೀಡುವ ಹಾಗೂ ಪರಿಶ್ರಮದ ಮೂಲಕ ಸಾಮಾನ್ಯ ಜನರಿಗೆ ಅನುಕೂಲ ಕಲ್ಪಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ, ಫಲಾನುಭವಿಗಳು ಇದರ ಪೂರ್ಣ ಪ್ರಯೋಜನೆ ಪಡೆಯಬೇಕು ಎಂದು ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು.


ಅವರು ಭಾನುವಾರ ಬಿಜೆಪಿ ಜಿಲ್ಲಾ ಎಸ್.ಸಿ.ಮೋರ್ಚ, ಉಡುಪಿ ಜಿಲ್ಲೆ, ಕುಂದಾಪುರ ವಿಧಾನಸಭಾ ಕ್ಷೇತ್ರ ಎಸ್.ಸಿ.ಮೋರ್ಚ, ಪ್ರಸಾದ್ ನೇತ್ರಾಲಯ ಮಲ್ಟಿ ಸ್ಷೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಕಾರ್ಲ್ ಜೈಸ್ ಇಂಡಿಯಾ(ಬೆಂಗಳೂರು) ಪ್ರೈ.ಲಿಮಿಟೆಡ್ ಇವರ ಜಂಟಿ ಆಶ್ರಯದಲ್ಲಿ ಬಸ್ರೂರು ಕೋಳ್ಕರೆ ಸಮಾಜ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಅಂಗವಾಗಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಜನರ ಆಶೋತ್ತರಗಳನ್ನು ಸೇವಾ ಯೋಜನೆಗಳ ಮೂಲಕ ಅನುಷ್ಠಾನಗೊಳಿಸುವ ಜನಪ್ರತಿನಿಧಿಗಳ ಕಾರ್ಯ ಪ್ರಶಂಸನೀಯ ಎಂದು ಅಭಿಪ್ರಾಯಪಟ್ಟರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲದ ಎಸ್.ಸಿ.ಮೋರ್ಚ ಅಧ್ಯಕ್ಷ ಮಹೇಶ್ ಕಾಳಾವರ ವಹಿಸಿದ್ದರು.
ಈ ಸಂಧರ್ಭದಲ್ಲಿ ರಾಜ್ಯ ಆಹಾರ ಮತ್ತು ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ರಾಜ್ಯ ಎಸ್.ಸಿ.ಮೋರ್ಚ ಪ್ರ.ಕಾರ್ಯದರ್ಶಿ ದಿನಕರ ಬಾಬು, ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಚಂದ್ರ ಹೆಗ್ಡೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲದ ಪ್ರ.ಕಾರ್ಯದರ್ಶಿ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸುಧೀರ್ ಕೆ.ಎಸ್., ಪ್ರಸಾದ ನೇತ್ರಾಲಯ ವ್ಯದೈಕೀಯ ನಿರ್ದೇಶಕ ನಾಡೋಜ ಡಾ.ಕೃಷ್ಣ ಪ್ರಸಾದ ಕೂಡ್ಲು,
ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚ ಅಧ್ಯಕ್ಷ ಗೋಪಾಲ ಕಳಂಜಿ, ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚ ಪ್ರ.ಕಾರ್ಯದರ್ಶಿ ಸದಾನಂದ ಆರ್.ಕೈ ಪುಂಜಾಲು, ಕುಂದಾಪುರ ತಾ.ಪಂ.ನಿಕಟ ಪೂರ್ವ ಉಪಾಧ್ಯಕ್ಷ ರಾಮ್ ಕೀಶನ್ ಹೆಗ್ಡೆ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಎಸ್.ಸಿ.ಮೋರ್ಚ ಪ್ರ.ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ಸ್ವಾಗತಿಸಿದರು. ನಾಗರಾಜ ಸಂತೆಕಟ್ಟೆ ವಂದಿಸಿದರು. ಕುಂದಾಪುರ ಮಂಡಳದ ಎಸ್.ಸಿ.ಮೋರ್ಚ ಪ್ರ.ಕಾರ್ಯದರ್ಶಿ ಮಹೇಶ್ ಎಂ.ಜಿ.ಬಸ್ರೂರು ಕಾರ್ಯಕ್ರಮ ನಿರೂಪಿಸಿದರು.











