ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ನೇತಾಜಿ ಸುಭಾಸ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಕಾಳಾವರದಲ್ಲಿ77 ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ನಡೆಯಿತು. ಕಾಳಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಾಮಚಂದ್ರ ನಾವಡ ರವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.
ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಆಚಾರ್ಯ, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಎಸ್.ಡಿ.ಎಂ.ಸಿ ನಾಮ ನಿರ್ದೇಶಿತ ಸದಸ್ಯರು ಆದ ಮಂಜುನಾಥ ಶೆಟ್ಟಿಗಾರ್, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರುಗಳು, ಹಳೆ ವಿದ್ಯಾರ್ಥಿಗಳು,ನಿವೃತ್ತ ಶಿಕ್ಷಕರಾದ ಆತ್ಮರಾಮ ಎಸ್ ಗುನಗಾ, ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗ, ದೈಹಿಕ ಶಿಕ್ಷಣ ಶಿಕ್ಷಕ ಅರುಣ್ ಕುಮಾರ್ ಮತ್ತು ಎಲ್ಲ ಸಹಶಿಕ್ಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತಗಾಯನ ನಡೆಯಿತು. ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಂದ ಅದ್ದೂರಿ ಪ್ರಭಾತ್ ಪೇರಿ ನಡೆಯಿತು. ಕನ್ನಡ ಭಾಷಾ ಶಿಕ್ಷಕ ರವಿರಾಜ್ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು, ಸಹಶಿಕ್ಷಕ ಗಣೇಶ ಶೆಟ್ಟಿಗಾರ್ ಇವರು ಸಿಹಿತಿನಿಸು ವಿತರಿಸಿದ ದಾನಿಗಳಿಗೆ ವಿಶೇಷ ವಂದನೆ ಸಲ್ಲಿಸಿ, ಮುಖ್ಯೋಪಾಧ್ಯಾಯಿನಿ ಗಾಯತ್ರಿ ಅಡಿಗ ಇವರು ಧನ್ಯವಾದ ಸಮರ್ಪಿಸಿದರು.











