ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ತೆಕ್ಕಟ್ಟೆ ಗ್ರಾಮ ಪಂಚಾಯತ್ ನಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು . ಗ್ರಾಮಪಂಚಾಯತ್ ಅಧ್ಯಕ್ಷರಾದ ಮಮತಾ ದೇವಾಡಿಗ ಧ್ವಜಾರೋಹಣ ಮಾಡಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ವೀರಮಹನೀಯರನ್ನುಸ್ಮರಿಸಿದರು.
ತೆಕ್ಕಟ್ಟೆಯ ನಿವೃತ್ತ ಯೋಧರಾದ ರವಿಚಂದ್ರ ಶೆಟ್ಟಿ ಇವರನ್ನು ವಿಶೇಷವಾಗಿ ಗ್ರಾಮ ಪಂಚಾಯತ್ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಂಜೀವ ದೇವಾಡಿಗ ಮಾಜಿ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು , ಹಿರಿಯ ಉಪನ್ಯಾಸಕರಾದ ಕೆವಿ ನಾಯಕ್ , ದಲಿತ ಸಂಘಟನೆಯ ಸತೀಶ್ ಕುಮಾರ್ ತೆಕ್ಕಟ್ಟೆ, ಮೊದಲಾದವರು ಉಪಸ್ಥಿತರಿದ್ದರು.











