ಕುಂದಾಪುರ ಮಿರರ್ ಸುದ್ದಿ…
ಕೋಟ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಇವರ ಜಂಟಿ ಆಶ್ರಯದಲ್ಲಿ 15ನೇ ಸುತ್ತಿನ ಜಂತು ಹುಳು ನಿವಾರಣೆ ಕಾರ್ಯಕ್ರಮ ಬುಧವಾರ ಶ್ರೀ ಸದ್ಯೋಜಾತ ದೇವಸ್ಥಾನದ ಮಾನಸ ಮಂದಿರ ಸಭಾಭವನ ಕೋಟತಟ್ಟು ಪಡುಕರ ಇಲ್ಲಿ ಜರಗಿತು.
ಕಾರ್ಯಕ್ರಮವನ್ನು ದ.ಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸ್ಮೀತಾ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ ವಹಿಸಿದ್ದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಜಂತು ಹುಳ ನಿರ್ವಹಣೆಗೆ ಔಷಧವನ್ನು ವಿತರಿಸಲಾಯಿತು.
ಮುಖ್ಯ ಅಭ್ಯಾಗತಾಗಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ವಿಸ್ತೀರ್ಣಾಧಿಕಾರಿ ಸರಸ್ವತಿ,ಕೋಟತಟ್ಟು ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.ಒಕ್ಕೂಟದ ಉಪವ್ಯವಸ್ಥಾಪಕ ಡಾ.ಅನಿಲ್ ಕುಮಾರ್ ಶೆಟ್ಟಿ ಪ್ರಾಸ್ತಾವನೆ ಸಲ್ಲಿಸಿದರು.ಕಾರ್ಯಕ್ರಮವನ್ನು ಒಕ್ಕೂಟದ ವಿಸ್ತೀರ್ಣಾಧಿಕಾರಿ ಪ್ರತಿಭಾ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು.ಕಾರ್ಯದರ್ಶಿ ವೀಣಾ ಸಹಕರಿಸಿದರು.











