ಕುಂದಾಪುರ ಮಿರರ್ ಸುದ್ದಿ..
ಕುಂದಾಪುರ : ಬಸ್ರೂರು ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ದಿನಕರ ಶೆಟ್ಟಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ದಿನಕರ ಶೆಟ್ಟಿ, ಕಾಂಗ್ರೆಸ್ ಬೆಂಬಲತರಾಗಿ ಗಿರಿಜಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ಇಲ್ಲಿ ಒಟ್ಟು 17 ಸ್ಥಾನವಿದ್ದು, ಬಿಜೆಪಿ 11, ಕಾಂಗ್ರೆಸ್ 5, ಸಿಪಿಐಎಂ 1 ಬೆಂಬಲಿತದ್ದಾರೆ. ಚುನಾವಣೆಯಲ್ಲಿ 11 ಮತಗಳನ್ನು ಪಡೆದರು. ಗಿರಿಜಾ ಶೆಟ್ಟಿ 5 ಮತ ಪಡೆದರು. 1 ಮತ ಅಸಿಂಧುವಾಯಿತು.
ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಭಾಗಿರಥಿ ಆಯ್ಕೆಯಾದರು.
ಬಸ್ರೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಹಿಂ.ವ.ಬ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂ.ವ.ಅ.-ಮ ಸ್ಥಾನಕ್ಕೆ ಮೀಸಲಾಗಿತ್ತು. ಚುನಾವನಾಧಿಕಾರಿಯಾಗಿ ಕುಂದಾಪುರ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶಾಂತ ಎಮ್, ಕರ್ತವ್ಯ ನಿರ್ವಹಿಸಿದರು.











