ಕುಂದಾಪುರ ಮಿರರ್ ಸುದ್ದಿ…
ಕೋಟ: ಐರೋಡಿ ಗ್ರಾಮಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಶುಕ್ರವಾರ ಐರೋಡಿ ಗ್ರಾಮದಲ್ಲಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಕು, ಉಪಾಧ್ಯಕ್ಷರಾಗಿ ಗೀತಾ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಸಾಲಿಗ್ರಾಮ ಪ.ಪಂ ಮುಖ್ಯಾಧಿಕಾರಿ ಇಂದು ಶ್ರೀ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಅಧ್ಯಕ್ಷರಾಗಿ ಸಕು, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿಯವರನ್ನು ಅಂತಿಮವಾಗಿ ಘೋಷಿಸಿದರು.
ಐರೋಡಿ ಗ್ರಾಮಪಂಚಾಯತ್ ನಲ್ಲಿ ಒಟ್ಟು 16ಸಂಖ್ಯಾಬಲದಲ್ಲಿ 13ಬಿಜೆಪಿ ಬೆಂಬಲಿತರು ಹಾಗೂ 3ಕಾಂಗ್ರೆಸ್ ಬೆಂಬಲಿತರು ಇದ್ದು ಅವಿರೋಧ ಆಯ್ಕೆಯಲ್ಲಿ ಭಾಗಿಯಾದರು. ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಪಂಚಾಯತ್ ಸದಸ್ಯರು ಅಭಿನಂದನೆ ಸಲ್ಲಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ,ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಮೇಶ್ ಕಾರಂತ್,ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.











