ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಜನತಾ ಸಮೂಹ ಸಂಸ್ಥೆಯ ಆವರಣದಲ್ಲಿ ಜರಗಿದ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮುಖ್ಯಸ್ಥರಾದ ಆನಂದ ಸಿ ಕುಂದರ್ ಅವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯದ ಅಂಗವಾಗಿ ಸಿಬ್ಬಂದಿಗಳು ದೇಶಭಕ್ತಿಯನ್ನು ಮ್ಯೆಗೂಡಿಸಿಕೊಂಡು ಸತ್ಪ್ರಜೆಗಳಾಗಬೇಕೆಂದು ಕರೆ ಇತ್ತರು. ಸಂಸ್ಥೆಯ ನಿರ್ದೇಶಕರುಗಳಾದ ಪ್ರಶಾಂತ ಕುಂದರ್, ರಕ್ಷಿತ್ ಕುಂದರ್ ಮತ್ತು ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.











