ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಬ್ಯಾಂಕ್ ಪ್ರಶಸ್ತಿಯ ಗರಿ

0
645

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು 65 ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, 66ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸುಸಂದರ್ಭ ಸಂಘವು 208 ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿ, 167 ಕೋಟಿಗೂ ಮಿಕ್ಕಿ ಸಾಲ ನೀಡಿದ್ದು, ಸತತ 13 ವರ್ಷಗಳಿಂದ `ಅ’ ತರಗತಿ ಆಡಿಟ್ ವರ್ಗೀಕರಣ ಹೊಂದಿದೆ ,2022-2023ನೇ ಸಾಲಿನಲ್ಲಿ ಶೇ.98.08ರಷ್ಟು ಸಾಲ ವಸೂಲಾತಿಯೊಂದಿಗೆ 5.17ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಸಂಘವು ಮುಂಚೂಣಿಯಲ್ಲಿದೆ.

Click Here

ಕೇಂದ್ರ ಸರಕಾರದ ಯೋಜನೆಯಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ರಾಜ್ಯದಲ್ಲೇ ಪ್ರಪ್ರಥಮವಾಗಿ ಸಹಕಾರಿ ಸಂಸ್ಥೆಯು ಅನುಷ್ಠಾನಕ್ಕೆ ತಂದಿರುವ ಬಗ್ಗೆ ಹಾಗೂ ತನ್ನದೇ ವಿಶಿಷ್ಟ ಯೋಜನೆಯಾದ ರೈತ ಸಂಜೀವಿನಿ ಕ್ರೆಡಿಟ್ ಕಾರ್ಡ್ ವಿತರಿಸಿದ ಬಗ್ಗೆ ಹಾಗೂ ಸಕಲ ಮಾರಾಟ ಮಳಿಗೆಯ ಮೂಲಕ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಕೃಷಿ ಉಪಕರಣ ಮತ್ತು ದಿನಬಳಕೆಯ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ವಿತರಿಸಿ ಯಶಸ್ವಿಯಾದ ಬಗ್ಗೆಮೆಚ್ಚುಗೆ ವ್ಯಕ್ತಪಡಿಸಿ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2021-2022ನೇ ಸಾಲಿನಲ್ಲಿ “ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ”ವೆಂದು, ಪ್ರಶಸ್ತಿಗೆ ಆಯ್ಕೆ ಮಾಡಿ ಆ. 19 ರಂದು ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರಕುಮಾರ್‍ರವರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಶರತ ಕುಮಾರ್ ಶೆಟ್ಟಿ ಇವರಿಗೆ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ರವೀಂದ್ರ ಕಾಮತ್ ಮತ್ತು ಭಾಸ್ಕರ ಶೆಟ್ಟಿ ಇವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here