ಕುಂದಾಪುರ ಮಿರರ್ ಸುದ್ದಿ…
ಗಂಗೊಳ್ಳಿ :ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ವರ್ಷ ಸೇವೆಯನ್ನು ಸಲ್ಲಿಸಿ ಕುಂಭಾಶಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಸರಿತಾ ಕೆ.ಎಸ್. ಇವರಿಗೆ ಬೀಳ್ಕೋಡುಗೆ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ, ಶಿಕ್ಷಣ ಸಂಯೋಜಕ ಶೇಖರ್ ಯು., ಗಂಗೊಳ್ಳಿ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರದೀಪ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಇದೇ ಸಂದರ್ಭ ವರ್ಗಾವಣೆಗೊಂಡ ಶಿಕ್ಷಕಿ ಸರಿತಾ ಕೆ.ಎಸ್. ಅವರನ್ನು ಶಾಲೆಯ ಶಿಕ್ಷಕರು ಮತ್ತು ಎಸ್‍ಡಿಎಂಸಿ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಎಸ್‍ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸದಸ್ಯರಾದ ಅಶೋಕ್ ಪೂಜಾರಿ, ಶೋಭಾ ಪೂಜಾರಿ, ಶೋಭಾ ಖಾರ್ವಿ, ಶೋಭಾ ಪೂಜಾರಿ, ರೇಷ್ಮಾ ಖಾರ್ವಿ, ದಾನಿಗಳಾದ ರಾಘವೇಂದ್ರ ಕೋಟಾನ್, ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ಕುಂದರ್ ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ಯಶೋದ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ಸನ್ಮಾನ ಪತ್ರ ವಾಚಿಸಿದರು. ಆಶಾ, ಶಾಂತಿ, ದೀಪಾ, ಸುಪ್ರೀತಾ ಮತ್ತು ಪಲ್ಲವಿ ಸಹಕರಿಸಿದರು. ಉಷಾ ಕುಮಾರಿ ವಂದಿಸಿದರು. ಶಶಿಶಂಕರ್ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು.











