ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ವಂಡ್ಸೆ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾಗಿ ಗೋವರ್ಧನ್ ಜೋಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಂಡ್ಸೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ನಡೆಯಿತು.
ಚುನಾವಣಾಧಿಕಾರಿಯಾಗಿ ವಾರಾಹಿ ಜಲಾಶಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಕಿರಣ್ ಪಡ್ತಿ ಕರ್ತವ್ಯ ನಿರ್ವಹಿಸಿದರು. ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರೇಣುಕಾ ಹೆಗ್ಡೆ ಸಹಕರಿಸಿದರು.
ಇಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಬಂದಿತ್ತು. ವಂಡ್ಸೆ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 7 ಸದಸ್ಯ ಸ್ಥಾನವಿದ್ದು ಕಾಂಗ್ರೆಸ್ ಬೆಂಬಲಿತ 5, ಬಿಜೆಪಿ ಬೆಂಬಲಿತ 2 ಸದಸ್ಯರಿದ್ದಾರೆ.











