ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ಇದರ ಕೋಟ ವಲಯದ ಗುಂಡ್ಮಿ ಕಾರ್ಯಕ್ಷೇತ್ರದ ಭಗವತಿ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ ಇತ್ತೀಚಿಗೆ ಹಮ್ಮಿಕೊಂಡಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಜಿ.ರಾಮಚಂದ್ರ ಐತಾಳ ಉದ್ಘಾಟಿಸಿ ಮಾತನಾಡಿ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ, ಸ್ವಾವಲಂಬಿ ಬದುಕಿಗೆ ಜ್ಞಾನವಿಕಾಸ ಸಹಕಾರಿಯಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೀದಿ ನಾಟಕದ ಮೂಲಕ ನೀರನ್ನು ಮಿತವ್ಯಯವಾಗಿ ಬಳಕೆ ಮಾಡುವ ಬಗ್ಗೆ ಹಾಗೂ ಇಂಗು ಗುಂಡಿಗಳ ಮೂಲಕ ನೀರನ್ನು ಕಾಪಾಡಿಕೊಳ್ಳುವ ಬಗ್ಗೆ ಹಾಗೂ ಜ್ಞಾನವಿಕಾಸ ಯುಟ್ಯೂಬ್ ಚಾನೆಲ್ ನೋಡುವುದರಿಂದ ಏನಲ್ಲ ಪ್ರಯೋಜನಗಳಿವೆ ಎನ್ನುವ ಬಗ್ಗೆ ಬೀದಿ ನಾಟಕದ ಮೂಲಕ ಶಿರೂರಿನ ಶ್ರೀವಿನಾಯಕ ಬೀದಿ ನಾಟಕ ತಂಡದವರು ಪ್ರದರ್ಶನದ ಮೂಲಕ ಪ್ರಚುರಪಡಿಸಿದರು.
ಸಾಲಿಗ್ರಾಮ ಪಟ್ಟಣ ಪಂಚಾಯತಿಯ ಸದಸ್ಯೆ ಸುಲತಾ ಹೆಗ್ಡೆ ಅಧ್ಯಕ್ಷತೆ ವಹಿಸಿ ಜ್ಞಾನವಿಕಾಸ ಕಾರ್ಯಕ್ರಮದಿಂದ ಮಹಿಳೆಯರಿಗೆ ಉತ್ತಮ ಅವಕಾಶಗಳು ಸಿಕ್ಕಿವೆ, ಸ್ವಉದ್ಯೋಗದ ಮೂಲಕ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಇನ್ನೂ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಕನಕ, ತಾಲೂಕಿನ ಸಮನ್ವಯ ಅಧಿಕಾರಿ ಪುಷ್ಪಲತಾ ಸೇವಾ ಪ್ರತಿನಿಧಿ ಶಶಿಕಲಾ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.












