ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಕೆಪಿಎಸ್ ಪ್ರೌಢಶಾಲೆ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಆತಿಥ್ಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾಟ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ಸಂಸ್ಥೆಯ ಪ್ರಭಾರ ಉಪ ಪ್ರಾಂಶುಪಾಲೆ ಜಯಶ್ರೀ ಭಟ್ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ದೇಹ ಮತ್ತು ಮನಸ್ಸುಗಳೆರಡರ ಸಮತೋಲನಕ್ಕೆ ಅತ್ಯಗತ್ಯ ನಮ್ಮ ಶರೀರದ ಸಾಮರ್ಥ್ಯ ಕ್ರೀಡೆಯಿಂದ ಮಾತ್ರ ಪೂರ್ಣ ಪ್ರಮಾಣದಲ್ಲಿ ಅನಾವರಣಗೊಳ್ಳಲು ಸಾಧ್ಯ ಎಂದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯ್ಕ್ ಬಹುಮಾನ ವಿತರಿಸಿದರು. ಸಭೆಯಲ್ಲಿ ಎಸ್‌ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಹಾಗೂ ವಸಂತ್ ಉಪಸ್ಥಿತರಿದ್ದರು. ಪಂದ್ಯಾಟವನ್ನು ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಹೊಳ್ಳ ಮತ್ತು ಉದಯ ಮಡಿವಾಳ ಎಂ ಸಂಘಟಿಸಿ ನಿರ್ವಹಿಸಿದರು
ಫಲಿತಾಂಶ
ಪ್ರಥಮ- ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂದಾಪುರ
ದ್ವಿತೀಯ – ಥೌಹಿದ್ ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿ











