ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಂ .ಜಿ. ಎಂ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆ.24ರಂದು ಮಣಿಪಾಲ್ ಮರೀನಾ ಸ್ಪೋಟ್ಸ್ ಕ್ಲಬ್ ನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಶಶಾಂಕ್ (Breast Stroke) ನಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು , ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂಧಿ ಅಭಿನಂದನೆ ಸಲ್ಲಿಸಿದ್ದಾರೆ.











