ಕುಂದಾಪುರ :ಶಿಕ್ಷಣ ಮತ್ತು ವಿದ್ಯಾರ್ಥಿಯ ಭವಿಷ್ಯದ ವಿಚಾರದಲ್ಲಿ ಶಿಕ್ಷಕರ ಹೊಣೆಗಾರಿಕೆ ಹೆಚ್ಚು- ಜಯಪ್ರಕಾಶ್ ಹೆಗ್ಡೆ

0
502

Click Here

Click Here

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ: ಶಿಕ್ಷಣ ಮತ್ತು ಆರೋಗ್ಯ ಪ್ರಮುಖ ಆದ್ಯತೆಗಳಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನದ ಸಂದರ್ಭದಲ್ಲಿ ಶಿಕ್ಷಕರ ಅಭಿಪ್ರಾಯವನ್ನೂ ಪರಿಗಣಿಸಬೇಕು. ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಮತದಾನದ ಹಕ್ಕು ಸಿಗುವಂತಾಗಬೇಕು ಎಂದು ಹಿಂದುಳಿದ ವರ್ಗಗಳ ಅಭಿವೃದ್ದಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಇವರ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸ ಮಾತ್ರವಲ್ಲ. ಕ್ರೀಡೆ, ಕಲೆ ಎಲ್ಲವೂ ಒಳಗೊಂಡಿದೆ. ಮಕ್ಕಳ ಆಸಕ್ತಿಯನ್ನು ಪೋಷಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆಗೆ ಮಗುವಿನ ದಾಖಲಾತಿಯ ಸಂದರ್ಭದಲ್ಲಿ ಜಾತಿಯನ್ನು ಸ್ಪಷ್ಟವಾಗಿ ನಮೋದಿಸಬೇಕು. ಪ್ರಾರಂಭದಲ್ಲಿ ಜಾತಿ ನಮೋದನೆ ಸರಿಯಾಗಿಲ್ಲದಿದ್ದರೆ ಮುಂದೆ ವಿದ್ಯಾರ್ಥಿ ಮೀಸಲಾತಿ ಸೌಲಭ್ಯ ಪಡೆಯುವಾಗ ಸಮಸ್ಯೆಯಾಗುತ್ತದೆ. ಪೋಷಕರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದರು.

Click Here

ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಶ್ರೀಕಾಂತ ರಾವ್ ಸಿದ್ಧಾಪುರ, ಕಲಿಸುವುದರ ಜೊತೆ ಶಿಕ್ಷಕರು ಕಲಿಯುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುವುದೆಂದರೆ ಜೀವಂತ ಕಡತ ಪತ್ರಗಳೊಂದಿಗೆ ಕೆಲಸ ಮಾಡಿದಂತೆ. ಪ್ರಾಯೋಗಿಕ ಜ್ಞಾನ ಮಕ್ಕಳೊಂದಿಗೆ ಬೆರೆತಾಗ ಬೇರೆಯದೆ ರೀತಿಯ ಅನುಭವವಾಗುತ್ತದೆ. ಜ್ಞಾನಕ್ಕೆ ಮಿಗಿಲಾದ ಸಂಪತ್ತಿಲ್ಲ. ಹಿಂದೆ ಭೌದ್ಧಿಕ ಸಾಮಥ್ರ್ಯವನ್ನೇ ಮಾನದಂಡವಾಗಿ ನೋಡಲಾಗುತ್ತಿದೆ ಎಂದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಎಂ. ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ನಾಡವರ ಸಂಘ ಕುಂದಾಪುರದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ್ ನಾಯಕ್, ಟೀಚರ್ಸ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಶಸ್ತಿ ಪುರಸ್ಕøತ ನಿವೃತ್ತ ಶಿಕ್ಷಕ ನವೀನಚಂದ್ರ ಶೆಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ಪುರಸಭೆ ಸದಸ್ಯೆ ಪ್ರಭಾವತಿ ಶೆಟ್ಟಿ, ಶಿಕ್ಷಕರ ಸಂಘಟನೆ ಅಧ್ಯಕ್ಷರುಗಳಾದ ಉದಯ ಕುಮಾರ್ ಶೆಟ್ಟಿ, ಗಣೇಶ ಕುಮಾರ್ ಶೆಟ್ಟಿ, ಜ್ಯೋತಿ, ಮೂರ್ತಿ ಎಂ.ಎಸ್., ಪ್ರದೀಪ್ ಭಂಡಾರಿ, ಪ್ರದೀಪ್ ಕುಮಾರ್ ಶೆಟ್ಟಿ, ಮಂಜುನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು.

ಕಾರ್ಯಕ್ರಮಕ್ಕೂ ಮೊದಲು ಶಿಕ್ಷಕರಿಂದ ಯಕ್ಷ ಗಾನ ವೈಭವ ನಡೆಯಿತು.

Click Here

LEAVE A REPLY

Please enter your comment!
Please enter your name here