ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಸರಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಕಾಲೇಜಿನ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಗೀತಾನಂದ ಪೌಂಢೇಶನ್ ಮಣೂರು ಆಯೋಜನೆಯಲ್ಲಿ ಮನಸ್ಮಿತಾ ಫೌಂಡೇಶನ್, ಸಮುದ್ಯತಾ ಈವೆಂಟ್ ಮ್ಯಾನೆಜ್ ಮೆಂಟ್ ಮತ್ತು ಶಾಲಾ ಕಾಲೇಜು ಅಭಿವೃದ್ದಿ ಸಮಿತಿಯ ಸಹಕಾರದೊಂದಿಗೆ ಒಂದು ದಿನದ ಚಟುವಟಿಕೆಯಾಧಾರಿತ ತರಬೇತಿ ಕಾರ್ಯಕ್ರಮ ಸೋಮವಾರ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಜೇಸಿ ತರಬೇತುದಾರೆ ಅಕ್ಷತಾ ಶೆಟ್ಟಿ ಕಾರ್ಯಕ್ರಮವನ್ನು ನೆರವೇರಿಸಿದರು.
ಸಮರೋಪ ಸಮಾರಂಭದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ಮಣೂರಿನ ಎಲ್ಲಾ ಶಿಕ್ಷಣ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳು “ವಸುದ್ಯೆವ ಕುಟುಂಬಕಂ” ಎನ್ನುವ ತತ್ವದಡಿಯಲ್ಲಿ ಕಾರ್ಯ ನಿರ್ವಹಿಸಲಿ ಎನ್ನುವುದು ನಮ್ಮೂರಿನ ಎಲ್ಲಾ ಸಂಘ ಸಂಸ್ಥೆಗಳ ಮಹತ್ವಾಕಾಂಕ್ಷೆಯಾಗಿದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವಪೂರ್ಣವಾಗಿದೆ ಎಂದರು.
ಈ ಸಂದರ್ಭದಲ್ಲಿ ಇಲ್ಲಿನ ವಿದ್ಯಾಸಂಸ್ಥೆಯಿಂದ ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜಯಂತಿ,ಉಪನ್ಯಾಸಕ ಮನೋಹರ್ ಉಪ್ಪುಂದ, ಪುರುಷೋತ್ತಮ್,ನಾಗೇಶ್ ಮಧ್ಯಸ್ಥ ಇವರುಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಲಕ್ಷ್ಮೀ ಸೋಮ ಬಂಗೇರ ಪದವಿ ಕಾಲೇಜು ಪ್ರಾಂಶುಪಾಲೆ ಡಾ.ಸುನೀತಾ ಸರಕಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡೆನ್ನಿಸ್ ಬಾಂಜಿ ,ಸಂಯುಕ್ತ ಫ್ರೌಢಶಾಲೆಯ ಮುಖ್ಯಶಿಕ್ಷಕ ನಿರಂಜನ್ ನಾಯಕ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸೇಸು ಟೀಚರ್,ಗೀತಾನಂದ ಫೌಂಡೇಶನ್ ವಿಶ್ವಸ್ಥರಾದ ದಿವ್ಯಲಕ್ಷ್ಮೀ ಪ್ರಶಾಂತ ಕುಂದರ್, ವ್ಯೆಷ್ಣವಿ ರಕ್ಷಿತ್ ಕುಂದರ್ ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಮ.ಸಿ ಅಧ್ಯಕ್ಷರಾದ ಜಯರಾಮ ಶೆಟ್ಟಿ, ನಾಗರಾಜ್ , ಮನಸ್ಮಿತಾ ಫೌಂಡೇಶನ್ ವಿಶ್ವಸ್ಥರಾದ ಸವಿತಾ.ಪಿ ತೋಳಾರ್ ಮತ್ತು ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕುಂದರ್ ಉಪಸ್ಥಿತರಿದ್ದರು. ಅವಿನಾಶ ಕಾಮತ್ ಕಾರ್ಯಕ್ರಮವನ್ನು ನಿರೂಪಿಸಿ, ಗೀತಾನಂದ ಸಮಾಜಕಾರ್ಯವಿಭಾಗದ ರವಿಕಿರಣ್ ಕೋಟ ಸಹಕರಿಸಿದರು.











