ಕುಂದಾಪುರ :ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

0
323

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ವಿ.ನಾರಾಯಣಸ್ವಾಮಿ ರಾಧಾಕೃಷ್ಣನ್ ಅವರ ಬದುಕೆ ಆದರ್ಶ ಪ್ರಾಯ ಅವರು ವ್ಯಕ್ತಿತ್ವವೇ ಭವ್ಯ. ಅವರು ಬದುಕಿನ ಪುಟಗಳಲ್ಲಿ ಶಿಸ್ತುಬದ್ಧತೆ, ಜ್ಞಾನದ ಆಳ ಶಿಕ್ಷಕರಾದ ನಮಗೆ ದಾರಿದೀಪವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಿ.ಲಲಿತಾದೇವಿ ವಹಿಸಿದ್ದರು.

Click Here

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಐಕ್ಯೂಎಸಿ ಸಂಯೋಜಕರಾದ ಡಾ.ಕೆ.ಎಂ.ಉದಯ
ಕುಮಾರ್ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ.ಎಂ.ವಿ ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಸರೋಜಾ ಎಂ. ಕಾರ್ಯಕ್ರಮ ನಿರ್ವಹಿಸಿದರು. ಖಜಾಂಚಿ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸುಮಲತಾ ನಾಯ್ಕ ವಂದಿಸಿದರು.

Click Here

LEAVE A REPLY

Please enter your comment!
Please enter your name here