ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಅ.1 ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಸಂದರ್ಭದಲ್ಲಿ ಕರ್ನಾಟಕ ಸರಕಾರದ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದ್ದು 2021ನೇ ಸಾಲಿನ ಪ್ರಶಸ್ತಿಗೆ ಪಂಚಾಯತ್ ರಾಜ್ ಪರಿಣತ, ನಿವೃತ್ತ ಉಪನ್ಯಾಸಕ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ಆಯ್ಕೆಯಾಗಿದ್ದಾರೆ.
ಸಮಾಜಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆಗಾಗಿ ಪ್ರಶಸ್ತಿಗೆ ಪರಿಗಣಿಸಲಾಗಿದ್ದು ಅ.1ರಂದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದದಲ್ಲಿ ನಡೆಯಲಿರುವ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.











