ಕುಂದಾಪುರ ಮಿರರ್ ಸುದ್ದಿ…

ಬೈಂದೂರು : ಸಂಸದರಾದ ಬಿ.ವೈ ರಾಘವೇಂದ್ರ ಅವರು ಇಂದು ಉಪ್ಪುಂದ ಕಾರ್ಯಕರ್ತ ಶಾಸಕರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ವೇಳೆಯಲ್ಲಿ ವಿಕಲಚೇತನರಿಗೆ ವಿದ್ಯುತ್ ಚಾಲಿತ ವೀಲ್ ಚೇರನ್ನು ಶಾಸಕರು ಮತ್ತು ಮಂಡಲದ ಅಧ್ಯಕ್ಷರು ಉಪಸ್ಥಿತಿಯಲ್ಲಿ ಹಸ್ತಾಂತರಿಸಿದರು.
ಸಂಸದರು ಶಾಸಕರ ಜೊತೆಗೂಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆಸಿ ಬೈಂದೂರು ವಿಧಾನಸಭಾ ಕ್ಷೇತ್ರದ ಮನೆ ಮನೆ ಶುದ್ದ ಕುಡಿಯುವ ನೀರಿನ ಯೋಜನೆ, ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ, ಗೋಮಾಳಗಳ ಅಳತೆ ಹಾಗೂ ಅಭಿವೃದ್ಧಿ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯನ್ನು ಬೈಂದೂರು ಶಾಸಕರ ಕಛೇರಿಯಲ್ಲಿ ನಡೆಸಲಾಯಿತು.
ಬಿಜೆಪಿ ಕಚೇರಿ ಬೈಂದೂರು ಭೇಟಿ ಮುಂದಿನ ನಡೆಯ ಬಗ್ಗೆ ಪಕ್ಷದ ಪ್ರಮುಖರ ಜೊತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ,ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ,ಸುರೇಶ್ ಶೆಟ್ಟಿ ಉಪ್ಪುಂದ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.











