ಕುಂದಾಪುರ ಮಿರರ್ ಸುದ್ದಿ…

ಕೋಟ: ಸಾಧನೆಗೆ ಹಲವು ಕವಲುಗಳಿವೆ ಆದರೆ ಸದ್ಭಿನಿಯೋಗ ಹೇಗೆ ಮಾಡಿಕೊಳ್ಳುತ್ತೇವೆ ಅನುವುದರ ಮೇಲೆ ತಿರ್ಮಾನಗೊಳ್ಳುತ್ತದೆ ಇದಕ್ಕೆ ಎ.ಕೆ ಶೆಟ್ಟಿ ಅಂತವರು ಸಾಕ್ಷಿಯಾಗಿದ್ದಾರೆ ಎಂದು ನಡೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಬೆಳ್ಳಿ ಹಬ್ಬದ ಅಂಗವಾಗಿ ರಜತ ಗೌವಾರ್ಪಣೆ ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಷೆ ಸೊಗಡುಗಾರ ಹಾಗೂ ಕರಾವಳಿ ವಾಟ್ಸಪ್ ಹೀರೋ ಖ್ಯಾತಿಯ ಎ.ಕೆ ಶೆಟ್ಟಿ ನಡೂರು ಇವರಿಗೆ ರಜತ ಗೌರವ ಸಲ್ಲಿಸಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಯುವ ಸಮುದಾಯ ಒಳ್ಳೆಯ ಸಂದರ್ಭವನ್ನು ಉಪಯೋಗಿಸಿಕೊಳ್ಳದೆ ವ್ಯರ್ಥಮಾಡುತ್ತಿರುವುದು ನಾವುಗಳು ಕಾಣುತ್ತಿದ್ದೇವೆ. ಆದರೆ ಎ.ಕೆ ಶೆಟ್ಟಿ ಸಾಮಾಜಿಕ ಜಾಲವನ್ನು ಸಮರ್ಪಕವಾಗಿ ಬಳಸಿಕೊಂಡು ಅದರಿಂದಲೇ ಸಾಧನೆಯ ಶಿಖರವನ್ನು ಏರಿದ್ದಾರೆ. ಇದೊಂದು ಇಂದಿನ ಯುವ ಪೀಳಿಗೆಗೆ ಮಾದರಿ ಎಂದರೆ ಅತಿಶಯೋಕ್ತಿಯಲ್ಲ ,ಇಂಥಹ ಪ್ರತಿಭೆಗಳನ್ನು ಅವರ ಸ್ವಗೃಹಕ್ಕೆ ತೆರಳಿ ಗೌರವಿಸುವ ಪಂಚವರ್ಣ ಸಂಸ್ಥೆಯ ಕಾರ್ಯ ನಿಜಕ್ಕೂ ಪ್ರಶಂಸನೀಯ ಈ ದಿಸೆಯಲ್ಲಿ ಇನ್ನಷ್ಟು ಸಾಧನೆಯ ಮೆಟ್ಟಿಲು ಏರಲು ಸಹಕಾರಿಯಾಗಿದೆ.ನಮ್ಮಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಸಿದ್ಧಪಡಿಸಿಕೊಳ್ಳಿ ಎಂದು ಯುವ ಸಮೂಹಕ್ಕೆ ಕರೆ ನೀಡಿದರು.
ಸಭೆಯಲ್ಲಿ ಎ.ಕೆ ಶೆಟ್ಟಿ ನಡೂರು ಇವರನ್ನು ಗೌರವಿಸಲಾಯಿತು. ಅಲ್ಲದೆ ನೆನಪಿನ ಬುತ್ತಿಯಾಗಿ ಗಿಡ ನೆಟ್ಟು ಸಂಭ್ರಮಿಸಲಾಯಿತು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ನಡೂರು ಗ್ರಾಮಪಂಚಾಯತ್ ಅಧ್ಯಕ್ಷ ಜಲಂಧರ್ ಶೆಟ್ಟಿ, ಮಾಜಿ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಶೆಟ್ಟಿ, ವಾಣಿಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸುಗುಣ ಟೀಚರ್ ,ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಪುಷ್ಭಾ ಕೆ ಹಂದಟ್ಟು ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ವಸಂತಿ ಹಂದಟ್ಟು ಸ್ವಾಗತಿಸಿದರು. ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯೆ ಶಕೀಲ ನಾಗರಾಜ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್ ಸಹಕರಿಸಿದರು.











