ಕುಂದಾಪುರ :ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

0
1076

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ, ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ, ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ., ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Click Here

ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ, ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here