ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ಪಂಜಾಬ್ ರಾಜ್ಯದ ಲುಧಿಯಾನದ ಶ್ರೀ ಬೈನಿ ಸಾಹಿಬ್ ಗುರುದ್ವಾರ ನಡೆಸುವ ರಾಷ್ಟ್ರೀಯ ಮಟ್ಟದ ಹಿಂದುಸ್ಥಾನಿ ಖಯಾಲ್ ಗಾಯಕಿ ಕಿರಿಯರ ವಿಭಾಗದ ಆನ್ ಲೈನ್ ಸಂಗೀತ ಸ್ಪರ್ಧೆಯ ಪ್ರಥಮ ಸುತ್ತಿನಲ್ಲಿ ತೇರ್ಗಡೆಯಾದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ದ್ವಿತೀಯ ಸುತ್ತಿನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.ದ್ವಿತೀಯ ಸುತ್ತಿನ ಸ್ಪರ್ಧೆಯು ಮಹಾರಾಷ್ಟ್ರದ ಪುಣೆಯಲ್ಲಿ ಇದೇ ನವೆಂಬರ್ 4ಮತ್ತು 5 ರಂದು ನಡೆಯಲಿದೆ.
ರಾಷ್ಟ್ರೀಯ ಮಟ್ಟದ ಸಂಗೀತ ಸ್ಪರ್ಧೆಗೆ ಆಯ್ಕೆಯಾದ ಕಾಲೇಜಿನ ಉದಯೋನ್ಮುಖ ಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.











