ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬುವರಿಗೆ ಅಪರಿಚಿತರ ತಂಡವೊಂದು ಚೂರಿ ಇರಿದು ಪರಾರಿಯಾದ ಘಟನೆ ಭಾನುವಾರ ಸಂಜೆ 7.30ಕ್ಕೆ ನಡೆದಿದೆ. ಇರಿತಕ್ಕೊಳಗಾದ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ.
ಸಂಜ ಸುಮಾರು 7ಗಂಟೆಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಕಾರಿನಲ್ಲಿ ಕೆಎ04ಎಂಬಿ 1131 ನಂಬರಿನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ಕೆ.ಎ.51 ಎಂಜಿ 9665 ನಂಬರಿನ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ಚೂರಿಯಲ್ಲಿ ರಾಘವೇಂದ್ರ ಅವರ ತೊಡೆಗೆ ಚೂರಿ ಹಾಕಿ ಕಾರಿನಲ್ಲಿ ಪರಾರಿಯಾಗಿದ್ದಾನೆಂದು ತಿಳಿದು ಬಂದಿದೆ. ಘಟನೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದಕುಮಾರ್, ಎಸೈ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.











