ಕೋಟ ಬ್ಲಾಕ್ ಕಾಂಗ್ರೆಸ್‍ನ ಇಂದಿರಾ ಭವನದಲ್ಲಿ ನಡೆದ ಮಹಾತ್ಮಾ ಗಾಂಧೀಜಿ, ಮಾಜಿ ಪ್ರಧಾನಿ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

0
279

Click Here

Click Here

ಸತ್ಯ, ಶಾಂತಿ ,ಅಹಿಂಸೆಯ ಮಹಾನ್ ಪ್ರತಿಪಾದಕ ಗಾಂಧೀಜಿ -ಬಿ.ಎಂ.ಸಂದೀಪ್ ಕುಮಾರ್

ಕುಂದಾಪುರ ಮಿರರ್ ಸುದ್ದಿ…
ಕೋಟ: ಅಹಿಂಸಾತ್ಮಕ ರೀತಿಯಲ್ಲಿ ಅವಿರತವಾಗಿ ಹೋರಾಟ ನಡೆಸಿ ಬ್ರಿಟಿಷರ ಕಪಿಮುಷ್ಟಿಯಲ್ಲಿದ್ದ ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿಸುವ ಮೂಲಕ ಸತ್ಯ ,ಶಾಂತಿ , ಅಹಿಂಸೆಯೇ ಯಶಸ್ಸಿನ ಮೂಲಮಂತ್ರವೆಂದು ಜಗತ್ತಿಗೆ ತೋರಿಸಿಕೊಟ್ಟಿರುವ ಮಹಾತ್ಮ ಗಾಂಧೀಜಿಯವರು ಮಹಾನ್ ಅಹಿಂಸಾ ಪ್ರತಿಪಾದಕ ಎಂದು ರಾಷ್ಟ್ರೀಯ ಕಾಂಗ್ರೆಸ್‍ನ ಎಐಸಿಸಿ ಪ್ರಧಾನ ಮುಖ್ಯ ಕಾರ್ಯದರ್ಶಿ ಪ್ರಸ್ತುತ ಗುಜರಾತ್ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಬಿ.ಎಂ.ಸಂದೀಪ್ ಕುಮಾರ್ ಹೇಳಿದರು.

ಸೋಮವಾರ ಕೋಟ ಬ್ಲಾಕ್ ಕಾಂಗ್ರೆಸ್‍ನ ಇಂದಿರಾ ಭವನದಲ್ಲಿ ನಡೆದ ಮಹಾತ್ಮಾ ಗಾಂಧೀಜಿಯವರ
ಹಾಗೂ ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಶ್ರಮಿಸಿದ ಮಾಜಿ ಪ್ರಧಾನಿ ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜನ್ಮ ದಿನಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Click Here

ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಪುಷ್ಪಾಚರಣೆ ಸಲ್ಲಿಸಲಾಯಿತು.

ಹಿರಿಯ ಕಾಂಗ್ರೆಸ್ ಮುಖಂಡ ಶಿವರಾಮ್ ಶೆಟ್ಟಿ ಮಲ್ಯಾಡಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಅಮೀನ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ರೇಖಾ ಪಿ ಸುವರ್ಣ, ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ರೋಷನಿ ಒಲೆವೆರಾ, ರಾಜ್ಯ ಪ್ರಧಾನ ಯುವ ಕಾಂಗ್ರೆಸ್‍ನ ಕಾರ್ಯದರ್ಶಿ ಅಜಿತ್ ಶೆಟ್ಟಿ ಯಾಳಕ್ಲು, ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಸುಶೀಲ ಪೂಜಾರಿ, ಮಾಜಿ ಕೋಟ ಪಂಚಾಯತ್ ಸದಸ್ಯೆ ಸುಧಾ ಪೂಜಾರಿ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here