ಬೆಂಗಳೂರು – ‘ಗಾಂಧಿ ಗ್ರಾಮ ಪುರಸ್ಕಾರ’ ಕೋಡಿ ಗ್ರಾಮ ಪಂಚಾಯತ್‍ಗೆ ಗಾಂಧೀ ಪುರಸ್ಕಾರ ಪ್ರದಾನ

0
233

Click Here

Click Here

ಕುಂದಾಪುರ ಮಿರರ್ ‌ಸುದ್ದಿ…

ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ 2022 23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕೋಡಿ ಗ್ರಾಮ ಪಂಚಾಯಿತಿಗೆ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ ವೇಟ್ ಹಾಲ್‍ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ ಖರ್ಗೆಯವರು ಗಾಂಧೀ ಪುರಸ್ಕಾರ ನೀಡಿ ಗೌರವಿಸಿದರು.

ಕೋಡಿ ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಪ್ರಶಸ್ತಿ ಪಡೆದುಕೊಂಡರು.

Click Here

ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಪಂಚಾಯತ್‍ರಾಜ್ ಅಪರ ಮುಖ್ಯ ಕಾರ್ಯದರ್ಶಿ ಉಮಾಮದೇವನ್ ಮೊದಲಾದವರು ಉಪಸ್ಥಿತರಿದ್ದರು.

 

Click Here

LEAVE A REPLY

Please enter your comment!
Please enter your name here