ಕುಂದಾಪುರ ಮಿರರ್ ಸುದ್ದಿ…
ಕೋಟ: ಶ್ರೀ ಅಘೋರೇಶ್ವರ ಕಲಾರಂಗ ಕಾರ್ತಟ್ಟು, ಚಿತ್ರಪಾಡಿ ವತಿಯಿಂದ ನೀಡಲಾಗುವ ಶ್ರೀ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಚಿತ್ರಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ, ವಾಗ್ಮಿ ಸತೀಶ್ ಶೆಟ್ಟಿ ಆಯ್ಕೆ ಯಾಗಿದ್ದಾರೆ.
ಈ ಬಾರಿಯ ಅಘೋರೇಶ್ವರ ಕಲಾರಂಗದ ರಾಜ್ಯೋತ್ಸವ ಕಾರ್ಯಕ್ರಮವನ್ನು ಶ್ರೀ ಅಘೋರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನ.18 ರ ಶನಿವಾರದಂದು ಕೋಟ ಮೂರುಕೈನ ಬಳಿಯಿರುವ ಶ್ರೀ ಅಘೋರೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದ್ದು ಈ ಬಾರಿ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆಗೈದ ವಾಗ್ಮಿ ದೈಹಿಕ ಶಿಕ್ಷಕ ಸತೀಶ್ ಶೆಟ್ಟಿಯವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು.
ರಾಜ್ಯೋತ್ಸವ ಪ್ರಶಸ್ತಿಯು ಬೆಳ್ಳಿಯ ಸ್ಮರಣಿಕೆಯಾಗಿದ್ದು ,ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ಕಲಾರಂಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











