ಭಟ್ಕಳದಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ:ಓರ್ವ ಮಹಿಳೆ ಸಾವು

0
553

Click Here

Click Here

ಕುಂದಾಪುರ ಮಿರರ್ ಸುದ್ದಿ…

ಭಟ್ಕಳ: ಕಾರು ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ಮೂಢ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ನಡೆದಿದೆ. ಮೃತ ಮಹಿಳೆಯನ್ನು ರೀಟಾ ಡಿಸೋಜಾ ಹಾಗೂ ಗಾಯಗೊಂಡವರನ್ನು ಜೇವಿಯರ್ ರಾಜ್ ಡಿಸೋಜಾ ಮತ್ತು ಪುತ್ರಿ ಇನ್ರಿಕಾ ಎಂದು ತಿಳಿದು ಬಂದಿದೆ.

Click Here

ಇವರು ಕಾರಿನಲ್ಲಿ ತಮ್ಮ ಪತಿ ಹಾಗೂ ಮಗಳೊಂದಿಗೆ ಉಡುಪಿ ಕಡೆಯಿಂದ ಗೋವಾ ಕಡೆಗೆ ಹೋಗುವ ವೇಳೆ ಮುರುಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಅಪಘಾತವಾಗಿದೆ. ತಕ್ಷಣ ಕಾರಿನಲ್ಲಿ ಸಿಲುಕಿ ಹಾಕಿಕೊಂಡ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಸಾಗಿಸಿವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ. ಹಾಗೂ ಮೃತ ಮಹಿಳೆಯ ಪತಿ ಹಾಗೂ ಪುತ್ರಿ ಸಣ್ಣ ಪುಟ್ಟಗಾಯಾಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click Here

LEAVE A REPLY

Please enter your comment!
Please enter your name here