ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಪ್ರಾರ್ಥನಾ ಪೈ ಅವರಿಗೆ ಪ್ರಥಮ ಸ್ಥಾನ

0
394

Click Here

Click Here

ಕುಂದಾಪುರ ಮಿರರ್ ಸುದ್ದಿ…

ಗಂಗೊಳ್ಳಿ : ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜೈನ್ ಕ್ರೀಡಾ ಶಾಲೆಯಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

Click Here

ಉಡುಪಿಯಲ್ಲಿ (ಅ.16) ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು.

ಈಕೆ ಗಂಗೊಳ್ಳಿಯ ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಇವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರರು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here