ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಹಿಂದೆ ಗ್ರಾಮ ಮಟ್ಟದಲ್ಲಿ ಗ್ರಾಮ ಸಹಾಯಕರು ಇರುತ್ತಿದ್ದರು. ಮುಂದುವರಿದಂತೆ ಪ್ರಸ್ತುತ ಹೋಬಳಿಗೊಬ್ಬರು ಕೃಷಿ ಅಧಿಕಾರಿಯನ್ನು ಕಾಣಬಹುದು. ಬೇರೆ ಬೇರೆ ಇಲಾಖೆಗಳಲ್ಲಿ ಹುದ್ದೆಗಳು ಹೆಚ್ಚಳವಾಗುತ್ತಿದೆ. ಆದರೆ ಕೃಷಿ ಇಲಾಖೆಯಲ್ಲಿ ಮಾತ್ರ ಹುದ್ದೆಗಳು ಕುಂಠಿತವಾಗುತ್ತಿದೆ. ಆಧ್ಯತಾ ವಲಯವಾಗಿದ್ದ ಕೃಷಿವಲಯವೇ ಇವತ್ತು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ರೈತರ ನಿರಾಸಕ್ತಿ, ಬೇಡಿಕೆ ಕುಸಿದಂತೆ ಅಧಿಕಾರಿಗಳ ಸಂಖ್ಯೆಯೂ ಕಡಿಮೆಯಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು.
ಅವರು ವಂಡ್ಸೆ ಶ್ರೀಯಾ ಕನ್ವನ್‍ಷನ್ ಹಾಲ್‍ನಲ್ಲಿ ವಂಡ್ಸೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಅ.31ರಂದು ನಿವೃತ್ತರಾದ ಸಿ. ಅಧಿಕಾರಿ ರಘುರಾಮ ಶೆಟ್ಟಿ ಚಿತ್ತೂರು ಇವರನ್ನು ಸಾರ್ವಜನಿಕರ ಅಭಿನಂದನಾ ಸಮಿತಿ ವಂಡ್ಸೆ ಹೋಬಳಿಯ ವತಿಯಿಂದ ಜರುಗಿದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ರೈತ ಪರವಾಗಿ ಕೆಲಸ ಮಾಡುವ ಅಧಿಕಾರಿಗಳ ರೈತರ ಮನಸ್ಸಿನಲ್ಲಿ ಶಾಶ್ವತವಾಗಿರುತ್ತಾರೆ. ರಘುರಾಮ ಶೆಟ್ಟರು ನಿವೃತ್ತಿಯ ಬಳಿಕವೂ ಕೃಷಿ, ಸೇವಾ ಚಟುವಟಿಕೆಗಳಲ್ಲಿ ಗುರುತಿಸಿಕೊಳ್ಳಬೇಕು. ರೈತ ಪರವಾಗಿರಬೇಕು ಎಂದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳ ಆಸಕ್ತಿಯಿಂದ ಅಭಿವೃದ್ದಿಯ ವೇಗ ಹೆಚ್ಚಾಗುತ್ತದೆ. ಶ್ರದ್ದೆಯಿಂದ ತಮ್ಮ ಜವಬ್ದಾರಿ ನಿಭಾಯಿಸುವ ಅಧಿಕಾರಿ ವರ್ಗ ಜನಮೆಚ್ಚುಗೆ ಪಡೆಯುವ ಮೂಲಕ ಶ್ಲಾಘನಾರ್ಯ ಸೇವೆಗೆ ಕಾರಣರಾಗುತ್ತಾರೆ. ನಿವೃತ್ತಿಯ ಸಮಯದಲ್ಲಿ ಪುನಾರವಲೋಕನವಾಗುತ್ತದೆ. ರಘುರಾಮ ಶೆಟ್ಟರು 36 ವರ್ಷ 9 ತಿಂಗಳು ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಬಳಿಕವೂ ಅವರ ಆಸಕ್ತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಮೃದ್ಧ ಬೈಂದೂರು ಕಲ್ಪನೆಗೂ ಕೊಡುಗೆ ಇರಲಿ ಎಂದರು.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸಿ.ಸದಾಶಿವ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಚಂದ್ರಶೇಖರ ನಾಯಕ್, ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ರೂಪಾ ಮಾಡ ಉಪಸ್ಥಿತರಿದ್ದರು.
ಕೃಷಿ ಸಹಾಯಕರಾಗಿ, ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ, ಸಹಾಯಕ ಕೃಷಿ ಅಧಿಕಾರಿಯಾಗಿ, ತಾಲೂಕು ಜಲನಯನ ಅಧಿಕಾರಿಯಾಗಿ, ಸೌಕೂರು ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ, ವಂಡ್ಸೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರಘುರಾಮ ಶೆಟ್ಟಿ ಅವರನ್ನುಸಾರ್ವಜನಿಕ ಅಭಿನಂದನಾ ಸಮಿತಿಯ ವತಿಯಿಂದ ರಘುರಾಮ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು. ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಗಣ್ಯರು ಗೌರವಿಸಿದರು.
ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀನಿವಾಸ ಪೂಜಾರಿ ಕಲ್ಮಾಡಿ, ನಿರ್ಮಲ ವಂಡ್ಸೆ, ಸುಧೀರ್ ಕುಮಾರ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಸ್ವಾಗತಿಸಿದರು. ಸ್ಮೀತಾ ಮತ್ತು ಬಳಗದವರು ಪ್ರಾರ್ಥನೆ ಮಾಡಿದರು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ಸನ್ಮಾನ ಪತ್ರ ವಾಚಿಸಿದರು. ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿರಾಜ ಶೆಟ್ಟಿ ವಂದಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಶಶಿಧರ ಶೆಟ್ಟಿ ವಂಡ್ಸೆ ಕಾರ್ಯಕ್ರಮ ನಿರ್ವಹಿಸಿದರು.











