ಕುಂದಾಪುರ :ಕನ್ನಡ ಶಾಲೆಗಳು ಬೆಳೆದರೆ ಕನ್ನಡ ಉಳಿಯುತ್ತದೆ – ರಶ್ಮಿ ಎಸ್. ಆರ್

0
303

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕನ್ನಡ ಮಾಧ್ಯಮ ಶಾಲೆಗಳು ಬೆಳೆದಾಗ ಕನ್ನಡದ ಉಳಿವು ಸಾಧ್ಯ. ಪೋಷಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್ ಹೇಳಿದರು.
ಕುಂದಾಪುರದ ಗಾಂದೀ ಮೈದಾನದಲ್ಲಿ ಬುಧವಾರ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಏಕೀಕರಣಕ್ಕೆ ಪೂರ್ವದಲ್ಲಿ ಸಾಕಷ್ಟು ಹೋರಾಟಗಳು ನಡೆದಿವೆ. 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಚನೆ, 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ಉಪಸ್ಥಿತಿಯಲ್ಲಿ ಬೆಳಗಾವಿ ಅಧಿವೇಶನದಲ್ಲಿ ಮೊದಲ ಬಾರಿಗೆ ಉದಯವಾಗಲಿ ಚೆಲುವ ಕನ್ನಡ ನಾಡು ಎನ್ನು ನಾಡಗೀತೆಯನ್ನು ಹಾಡಲಾಯಿತು. ನಂತರದ ಸಂದರ್ಭದಲ್ಲಿ ದೇಶ ವಿಭಜನೆಯ ಕಾಲಘಟ್ಟದಲ್ಲಿ ರಾಜ್ಯದಲ್ಲಿ ವಿವಿಧ ಪ್ರಾಂತ್ಯಗಳಲ್ಲಿ ಕರ್ನಾಟಕ ಏಕೀಕರಣಕ್ಕೆ ನಾಂದಿ ಹಾಡಲಾಯಿತು. ಹಲವಾರು ಹೋರಾಟಗಾರರು, ಸಾಹಿತಿಗಳು, ಸಂಘ ಸಂಸ್ಥೆಗಳ ಹೋರಾಟದ ಪರಿಣಾಮವಾಗಿ ಮೈಸೂರು ರಾಜ್ಯ ಸ್ಥಾಪನೆಯಾಯಿತು. ಬಳಿಕ ಕರ್ನಾಟಕ ಎಂಬ ಹೆಸರು ಬಂತು. ಕುಂದಾಪುರ ಕನ್ನಡ ಶುದ್ಧವಾಗಿ ಉಳಿದಿದೆ. ಅದನ್ನು ಬೆಳೆಸುವ ಜವಾಬ್ಧಾರಿ ನಮ್ಮದಾಗಬೇಕು ಎಂದು ಅವರು ಹೇಳಿದರು.
ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಬಸವರಾಜ್ ನೇತೃತ್ವದಲ್ಲಿ ಪೊಲೀಸ್, ಎನ್ಸಿಸಿ, ಸ್ಕೌಟ್ಸ್ ಹಾಗೂ ಭಾರತ್ ಸೇವಾದಳದ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಬಳಿಕ ನಗರ ವ್ಯಾಪ್ತಿಯ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧ್ಯೀಕ್ಷಕ ಬೆಳ್ಳಿಯಪ್ಪ, ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್ ಆರ್., ಕೆ.ಯು, ಪುರಸಭಾ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್. ಶೋಭಾ ಶೆಟ್ಟಿ ಸ್ವಾಗತಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
Click Here

LEAVE A REPLY

Please enter your comment!
Please enter your name here