ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಠಲವಾಡಿಯ ಭಗವಧ್ವಜ ಕಟ್ಟೆಯಲ್ಲಿ ಕನ್ನಡಪರ ಹೋರಾಟಗಾರ ದಿನೇಶ್ ಪುತ್ರನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕುಂದಾಪುರ ತಾಲೂಕಿನ ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸಬೇಕು. ರಾಜ್ಯದ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಕನ್ನಡದಲ್ಲಿಯೇ ವ್ಯವಹರಿಸಿ, ಕನ್ನಡದಲ್ಲಿಯೇ ಆದೇಶಗಳನ್ನು ಹೊರಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಸಂತೋಷ, ಯೋಜನಾಧಿಕಾರಿ ರಾಘು ವಿಠಲವಾಡಿ, ಕೋಶಧಿಕಾರಿ ದಿವಾಕರ್ ಮೆಂಡನ್ ಮತ್ತು ವಿಠಲವಾಡಿ ಫ್ರೆಂಡ್ಸ್ ನ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಿತಿನ್ ವಿಠಲವಾಡಿ ಕಾರ್ಯಕ್ರಮ ನಿರೂಪಿಸಿದರು.











