ಕೋಟ :ನಾಡು ನುಡಿಯ ಜತೆಗೆ ಪಂಚವರ್ಣದ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ – ಶಂಭುಲಿಂಗಯ್ಯ

0
578
????????????????????????????????????

Click Here

Click Here

ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮ

ಕುಂದಾಪುರ ಮಿರರ್ ಸುದ್ದಿ…
ಕೋಟ: ನಾಡು ನುಡಿಯ ಜತೆಗೆ ಪಂಚವರ್ಣ ಸಂಸ್ಥೆಯ ಸಾಮಾಜಿಕ ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಹೇಳಿದರು.

ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ -2023 ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡದ ಧ್ವಜವನ್ನು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಬಾನೆತ್ತರಕ್ಕೆ ಏರಿಸುವ ಮೂಲಕ ಚಾಲನೆ ನೀಡಿ ಮಾತಮಾಡಿ ಸಂಘಸಂಸ್ಥೆಗಳು ನಿರಂತವಾಗಿ ಕ್ರೀಯಾಶೀಲತೆಯಲ್ಲಿ ತೊಡಗಿಕೊಳ್ಳಬೇಕು, ಅದರ ಜತೆಗೆ ಭಾಷಾಭಿಮಾನದ ಕಿಚ್ಚು ಪ್ರತಿಯೊಬ್ಬರಲ್ಲೂ ಬೆಳೆಯ ಬೇಕು ಎಂದು ಶುಭಹಾರೈಸಿದರು.

ಕನ್ನಡ ತಾಯಿ ಭುವನೇಶ್ವರಿ ದೀಪ ಬೆಳಗಿಸುವ ಮೂಲಕ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ ಉದ್ಘಾಟಿಸಿದರು.
ನೀಡಿದರು.

ಅಧ್ಯಕ್ಷೆತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

Click Here

ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸಾಮಾಜಿಕ ಮುಖಂಡ ರಮೇಶ್ ಪ್ರಭು, ಕುಂದಾಪುರ ಆಯುಷ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಶೋಕ್ ಆಚಾರ್, ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ,ಪರಿಸರವಾದಿ ಕೋ.ಗಿ ನಾ ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

ರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಪ್ರಧಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ ಮಾತನಾಡಿ ರಾಜ್ಯೋತ್ಸವ ಪ್ರಶಸ್ತಿಗಳು ದೊಡ್ಡದೊಡ್ಡ ರಾಜಕಾರಣಿಗಳ ಶಿಫಾರಸ್ಸಿನ ಮೂಲಕ ದೊರೆಯುತ್ತಿರುವುದು ಬೇಸರದ ಸಂಗತಿ ಅದು ನೈಜ ಕಾರ್ಯಕ್ರಮಗಳನ್ನು ನೀಡುವ ಸಾಧಕರಿಗೆ,ಸಂಘಸಂಸ್ಥೆಗಳಿಗೆ ಸಿಗದಿರುವ ಬಗ್ಗೆ ಖೇದ ವ್ಯಕ್ತಡಿಸಿ ಈ ರೀತಿಯ ಪ್ರಸಂಗಗಳು ಮುಂದುವರೆದರೆ ವಿಧಾನಸೌಧದ ಎದುರು ಪ್ರತಿಭಟನೆ ಕೂರುವುದಾಗಿ ಎಚ್ಚರಿಸಿದರು.

ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಶಕೀಲ ಎನ್ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಸದಸ್ಯೆ ಸುಜಾತ ಬಾಯರಿ ನಿರೂಪಿಸಿದರು. ಪಂಚವರ್ಣದ ಕಾರ್ಯದರ್ಶಿ ಸುಧೀಂದ್ರ ಜೋಗಿ ವಂದಿಸಿದರು.

ಕಾರ್ಯಕ್ರಮವನ್ನು ಪಂಚವರ್ಣ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

ಇದೇ ಬರುವ ನ.10ರಂದು ಸಂಜೆ ಕೋಟದ ಗಾಂಧಿ ಮೈದಾನದಲ್ಲಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ ಇವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.ಚಾಪರ್ಕ ಕಲಾವಿದರಿಂದ ಹಾಸ್ಯಮಯ ನಾಟಕ ಹೆಸರಿಟ್ಟಾಯ್ತು ಪ್ರದರ್ಶನಗೊಳ್ಳಲಿದೆ.

Click Here

LEAVE A REPLY

Please enter your comment!
Please enter your name here