ಕೋಟ ಪಂಚವರ್ಣ ಸಂಘಟನೆ ವತಿಯಂದ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ವಾಹನ ಶೋಭಾಯಾತ್ರೆ

0
228

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕೋಟ: ಕೋಟ ಗ್ರಾಮಪಂಚಾಯತ್ ಸನಿಹದ ಪಂಚವರ್ಣದ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಕೋಟ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಸದ್ಭಾವನಾ -2023 ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ವಾಹನಶೋಭಾಯಾತ್ರೆಗೆ ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಚಾಲನೆ ನೀಡಿದರು.

ಕೋಟ ರಾಷ್ಟ್ರೀಯ ಹೆದ್ದಾರಿ ಕೋಟ, ಮಣೂರು, ಕೋಟ ಹೈಸ್ಕೂಲ್ ಹೆದ್ದಾರಿಯ ಮೂಲಕ ಕನ್ನಡ ಶೋಭಾಯಾತ್ರೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ,ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್,ಕೋಟ ಗ್ರಾಮಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸಾಮಾಜಿಕ ಮುಖಂಡ ರಮೇಶ್ ಪ್ರಭು,ಕುಂದಾಪುರ ಆಯುಷ್ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಅಶೋಕ್ ಆಚಾರ್,ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರದಾನಕಾರ್ಯದರ್ಶಿ ಕೆ.ದಿನೇಶ್ ಗಾಣಿಗ,ಪರಿಸರವಾದಿ ಕೋ.ಗಿ ನಾ ,ಪಂಚವರ್ಣದ ಸ್ಥಾಪಾಕಾಧ್ಯಕ್ಷ ಸುರೇಶ್ ಗಾಣಿಗ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here