ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆಯವರು ನ. 5, 6ರಂದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆಸಿದ ರಾಜ್ಯ ಮಟ್ಟದ ಬಾಲಕರ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಪೈಜಾನ್ 82 ಕೆಜಿ ವಿಭಾಗದಲ್ಲಿ ಮತ್ತು ಲಕ್ಷ್ಮೀಶ್ 97+ ಕೆ ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ ಸಾಧನೆ ಮೆರೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.











