ಬಿದ್ಕಲ್ ಕಟ್ಟೆಯಲ್ಲಿ ಉಚಿತ ಆರೋಗ್ಯ ಶಿಬಿರ ಉದ್ಘಾಟನೆ
ಕುಂದಾಪುರ ಮಿರರ್ ಸುದ್ದಿ
ಕುಂದಾಪುರ: ಒಬ್ಬ ವ್ಯಕ್ತಿಗೆ ತ್ಯಾಗ ಮತ್ತು ಸೇವೆ ಎಂಬ ಆದರ್ಶಗಳಿದ್ದರೆ ಜಗತ್ತಿನಲ್ಲಿ ಸಾಮಾನ್ಯ ವ್ಯಕ್ತಿಯನ್ನು ಅಸಾಮಾನ್ಯ ವ್ಯಕ್ತಿಯನ್ನಾಗಿ ಮಾಡುವ ಸಾಮರ್ಥ್ಯ ಇರುತ್ತದೆ. ಸಮರ್ಪಣ ಮನೋಭಾವ ನಮ್ಮನ್ನು ಸಾರ್ಥಕತೆಯೆಡೆಗೆ ಕೊಂಡೋಯ್ಯುತ್ತದೆ. ಆ ಹಿನ್ನೆಲೆಯಲ್ಲಿ ನೇತ್ರದಾನದ ಮೂಲಕ ಬೇರೆಯವರಿಗೆ ಕಣ್ಣಾಗುವುದು ಸಮಾಜದಲ್ಲಿ ಮಾಡುವ ದೊಡ್ಡ ಸೇವೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಳಿಕಾಯ ಹೇಳಿದರು.

ಅವರು ಶನಿವಾರ ಬಿದ್ಕಲ್‍ಕಟ್ಟೆಯ ನಾಗಲಕ್ಷ್ಮೀ ಸಭಾಭವನದಲ್ಲಿ ನಡೆದ ಬಿಜೆಪಿ ಯುವ ಮೋರ್ಚ ಕುಂದಾಪುರ ಮಂಡಲದ ವತಿಯಿಂದ ಪ್ರಧಾನಿ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದಡಿಯಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಷೇಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಕಾರ್ಲ ಹೈಸ್ ಇಂಡಿಯಾ ಪ್ರೈ.ಲಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣ ವಿಭಾಗ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲ್‍ಕಟ್ಟೆ, ಇವುಗಳ ಆಶ್ರಯದಲ್ಲಿ ನೇತ್ರದಾನ, ರಕ್ತದಾನ, ಕಣ್ಣಿನ ಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ ಕಾರ್ಯಕರ್ತರು ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗಿರಿಸಿಕೊಂಡವರಲ್ಲ. ನಿರಂತರ ಸಮಾಜದೊಂದಿಗೆ ಸಕ್ರಿಯವಾಗಿದ್ದು ಜನರ ನೋವು ನಲಿವುಗಳಿಗೆ ಸ್ಪಂದಿಸುತ್ತಾ ಇರುತ್ತಾರೆ. ಈ ಸಮರ್ಪಣಾ ಮನೋಭಾವ ಪಕ್ಷದ ಹಿರಿಯರಿಂದ ನೀಡಲ್ಪಟ್ಟ ಕಾಣಿಕೆ. ಇವತ್ತು ಐದು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಅದಕ್ಕೆ ಕಾರ್ಯಕರ್ತರ ಶ್ರಮ, ಸಾಧನೆಯೇ ಕಾರಣ. ಬಿಜೆಪಿ ಇವತ್ತು ಜಗತ್ತಿನ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಅದರ ಹಿನ್ನಲೆಯಲ್ಲಿ ಕಾರ್ಯಕರ್ತರ ಪರಿಶ್ರಮ, ಸಮರ್ಪಣ ಭಾವವಿದೆ ಎಂದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವ ಮೋರ್ಚ ಅಧ್ಯಕ್ಷ ಅವಿನಾಶ್ ಉಳ್ತೂರು ವಹಿಸಿದ್ದರು.
ಈ ಸಂದರ್ಭದಲ್ಲಿ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಮಂಡಳದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಉಡುಪಿ ಯುವಮೋರ್ಚ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ಜಿಲ್ಲಾ ಯುವಮೋರ್ಚ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಯುವಮೋರ್ಚ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ವೈದ್ಯಕೀಯ ನಿರ್ದೇಶಕ ನಾಡೋಜ ಡಾ.ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ ನೇತ್ರಾಲಯದ ಕಣ್ಣಿನ ತಜ್ಞೆ ಡಾ. ಸೀಮಾ, ಕುಂದಾಪುರ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದ ಅಧ್ಯಕ್ಷ ಜಯಕರ ಶೆಟ್ಟಿ, ಕುಂದಾಪುರ ಮಂಡಳದ ಪ್ರ.ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ನಿಕಟಪೂರ್ವ ಮಂಡಳದ ಅಧ್ಯಕ್ಷ ಕಾಡೂರ್ ಸುರೇಶ್ ಶೆಟ್ಟಿ, ಹಾಲಾಡಿ ಯುವಮೋರ್ಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುದೀಪ್ ಶೆಟ್ಟಿ ಬೆಳ್ವೆ, ಹರ್ಷ ಪೂಜಾರಿ ಅಮಾಸೆಬೈಲು, ಶಂಕರ ಮೊಗವೀರ, ಪ್ರಜ್ವಲ್ ಶೆಟ್ಟಿ ಉಪಸ್ಥಿತರಿದ್ದರು.
ಯುವ ಮೋರ್ಚ ಪ್ರ.ಕಾರ್ಯದರ್ಶಿ ಚೇತನ್ ಬಂಗೇರಾ ಸ್ವಾಗತಿಸಿದರು, ಸುನೀಲ್ ಖಾರ್ವಿ ವಂದಿಸಿದರು. ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು.











