ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಅದ್ಭುತವಾಗಿದೆ. ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಂಪಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಚ್. ವರ್ಷಾ ರವಿಶಂಕರ್ ದ್ವಿತೀಯ ಸ್ಥಾನ, ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ತ್ರತೀಯ ಸ್ಥಾನ, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೆರ್ಲಿಯಾ ತ್ರತೀಯ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ವಿಘ್ನೇಶ್ ತ್ರತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.











