ಗಂಗೊಳ್ಳಿ ಅಗ್ನಿ ಅವಘಡ : 10ಕೋಟಿ ಪರಿಹಾರಕ್ಕೆ ಸಂಸದ, ಶಾಸಕರಿಂದ ಸಿ.ಎಂ. ಭೇಟಿ

0
697

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಗಂಗೊಳ್ಳಿಯಲ್ಲಿ ಸೋಮವಾರ ಬೆಂಕಿಗಾಹುತಿಯಾದ ಮೀನುಗಾರಿಕಾ ಬೋಟುಗಳಿಗೆ ಪರಿಹಾರ ನೀಡುವಂತೆ ಶಿವಮೊಗ್ಗ ಸಂಸದ ಬಿ.ವೈ; ರಾಘವೇಂದ್ರ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಬುಧವಾರ ಮುಖ್ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.

Click Here

ಅಗ್ನಿ ಅವಘಡದಲ್ಲಿ ಸುಮಾರು 8 ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿ, 2 ಡಿಂಗಿ ಹಾಗೂ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈ ಅವಘಡದಿಂದ ಮೀನುಗಾರರು ಆಘಾತ ಹೊಂದಿದ್ದಾರೆ. ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ದೋಣಿಗಳಿಗೆ10 ಕೋಟಿ ರೂ. ಪರಿಹಾರ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

Click Here

LEAVE A REPLY

Please enter your comment!
Please enter your name here