ಶಂಕರನಾರಾಯಣ :ಪ್ರತೀ ಜಿಲ್ಲಾ ಪಂಚಾಯತ್ ಗೆ ಎರಡು ಆಸ್ಪತ್ರೆ – ಸಂಸದ ಬಿ.ವೈ.ಆರ್ ಭರವಸೆ

0
732

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮುಂದಿನ ದಿನಗಳಲ್ಲಿ ಪ್ರತೀ‌ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಎರಡರಂತೆ ಸರ್ಕಾರೀ ಸುಸಜ್ಜಿತ ಆಸ್ಪತ್ರೆಗಳನ್ನು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಹೇಳಿದ್ದಾರೆ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು.

ರಾಮ ರಾಜ್ಯದ ಕನಸನ್ನು ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಗಾಂಧೀಜಿ ಕಂಡ ಕನಸು ಪ್ರತಿ ಗ್ರಾಮಗಳು ಸ್ವರಾಜ್ಯವಾಗಬೇಕು ಎನ್ನುವುದಾದರೆ ಹಿಂದಿನ 70 ವರ್ಷದ ಕಾಂಗ್ರೆಸ್ ಸರ್ಕಾರ ಜನರ ತೆರಿಗೆ ಹಣವನ್ನು ಅಭಿವೃದ್ಧಿಗೆ ಯಾಕೆ ಬಳಸಿಲ್ಲ? ಎಂದು ಪ್ರಶ್ನಿಸಿದ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಪ್ರತಿ ಗ್ರಾಮಗಳಲ್ಲೂ ಅಭಿವೃದ್ಧಿಯನ್ನು ಕಾಣುತ್ತಿದ್ದೇವೆ ಎಂದರು.

Click Here

ಶಂಕರನಾರಾಯಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 80 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು ಸರ್ವತೋಮುಖ ಅಭಿವೃದ್ಧಿಯನ್ನು ಕಂಡಿದೆ ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇದೇ ಸಂದರ್ಭ ಶಂಕರನಾರಾಯಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಸಂಸದ ಬಿ ವೈ ರಾಘವೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದರು.

ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಸ್ತಾವಿಸಿದರು, ಸ್ಥಳೀಯ ಮುಖಂಡರಾದ ಶಂಕರನಾರಾಯಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಮೇಶ್ ಶೆಟ್ಟಿ ಕಲಗದ್ದೆ ಸ್ವಾಗತಿಸಿದರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here