ವಂಡ್ಸೆ :ಭಾರತೀಯ ಸೇನೆಗೆ ಆಯ್ಕೆಗೊಂಡಿರುವ ಸುನೀತಾ ಪೂಜಾರಿ ಅವರಿಗೆ ಮಾತೃಭೂಮಿ ಯುವ ಸಂಘಟನೆಯಿಂದ ಸನ್ಮಾನ

0
633

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಬಿ.ಎಸ್.ಎಫ್ ಕ್ಯಾಂಪ್ ನಲ್ಲಿ ತರಬೇತಿ ಪಡೆದು ಭಾರತ ಸೇನೆಯಿಂದ ಭಾರತ-ಬಾಂಗ್ಲಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸಲು ತೆರಳುತ್ತಿರುವ ಹೆಮ್ಮಾಡಿಯ ಸುನೀತಾ ಪೂಜಾರಿ ಅವರನ್ನು ಇತ್ತೀಚೆಗೆ ವಂಡ್ಸೆಯ ಆತ್ರಾಡಿ ಮಾತೃಭೂಮಿ ಯುವ ಸಂಘಟನೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

Click Here

ವಂಡ್ಸೆಯ ಶ್ರೀಯಾ ಕನ್ವನ್‍ಷನ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಭಾರತೀಯ ಸೇನೆಗೆ ಆಯ್ಕೆಗೊಂಡು ಕರ್ತವ್ಯಕ್ಕೆ ತೆರಳಲು ಸಜ್ಜಾಗಿರುವ ಸುನೀತಾ ಪೂಜಾರಿ ಅವರನ್ನು ಸನ್ಮಾನಿಸಿ, ಅಭಿನಂದನಾ ಮಾತುಗಳನ್ನಾಡಿದರು.

ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಗ್ರಾ.ಪಂ. ನಿಕಟಪೂರ್ವಾಧ್ಯಕ್ಷರು, ಮಾತೃಭೂಮಿ ಯುವ ಸಂಘಟನೆ ಗೌರವ ಸಲಹೆಗಾರರಾದ ಉದಯ ಕುಮಾರ್ ಶೆಟ್ಟಿ, ಗ್ರಾ.ಪಂ. ಮಾಜಿ ಅಧ್ಯಕ್ಷರು, ಮಾತೃಭೂಮಿ ಯುವ ಸಂಘಟನೆ ಗೌರವಾಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಡಿ, ಮಾತೃಭೂಮಿ ಯುವ ಸಂಘಟನೆ ಅಧ್ಯಕ್ಷ ಶಶಿಧರ ಆಚಾರ್ಯ, ಕಾರ್ಯದರ್ಶಿ ವಿನಂತ ಗಾಣಿಗ, ಗ್ರಾ.ಪಂ.ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ತಾ.ಪಂ. ಮಾಜಿ ಸದಸ್ಯ ಉದಯ ಜಿ ಪೂಜಾರಿ, ಜೆಸಿಐ ಮಾರಣಕಟ್ಟೆ ಅಧ್ಯಕ್ಷ ಗುರುಪ್ರಸಾದ್, ಮಾತೃಭೂಮಿ ಯುವ ಸಂಘಟನೆ ನಿಕಟಪೂರ್ವಾಧ್ಯಕ್ಷ ಪ್ರಸಾದ್ ಆಚಾರ್ಯ, ಮಾಜಿ ಅಧ್ಯಕ್ಷರಾದ ಸಂದೇಶ್ ಶೆಟ್ಟಿ, ರಮೇಶ ಪೂಜಾರಿ ಬಳಿಹಿತ್ಲು, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ವಂಡ್ಸೆ ವ್ಯವಸಾಯಿಕ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ಹಕ್ಲಾಡಿ ಗ್ರಾ.ಪಂ. ಸದಸ್ಯ ಅಶೋಕ್ ಪೂಜಾರಿ, ಮಾತೃಭೂಮಿ ಯುವ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಾಸು ಜಿ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here