ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಸಂಸದೀಯ ವ್ಯವಹಾರಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಅಣುಕು ಯುವ ಸಂಸತ್ ಸ್ಪರ್ಧೆ ನಡೆಯಿತು.
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಾರುತಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು ಅಣುಕು ಯುವ ಸಂಸತ್ ನಿಮ್ಮ ಮುಂದಿನ ಭವಿಷ್ಯಕ್ಕೆ ಉತ್ತಮವಾದ ಕಾರ್ಯಕ್ರಮ ಎಂದು ಶುಭ ಹಾರೈಸಿದರು.
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಅಧ್ಯಕ್ಷತೆ ವಹಿಸಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅತ್ಯತ್ತಮ ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಭವಿಷ್ಯದ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಕಟ್ ಬೇಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೈಶಾಲಿ, ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ, ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಯಾನಂದ, ಬ್ರಹ್ಮಾವರ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ವಾಸು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿರುವ 40 ವಿದ್ಯಾರ್ಥಿಗಳಿಗೆ ಎರಡು ದಿನಗಳ ಕಾಲ ಸೂಕ್ತ ತರಬೇತಿ ನೀಡಿ ಅಂತಿಮ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಪುಗಾರಿಕೆಯ ಮೂಲಕ
5ಜನ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಸ್ಪರ್ಧೆಯಲ್ಲಿ ಬಸ್ರೂರು ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧ್ರುವ ಪ್ರಥಮ ಸ್ಥಾನ, ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಸರ್ಗ ದ್ವಿತೀಯ ಸ್ಥಾನ, ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಲಕ್ಷ್ಮಿಕಾಂತ್ ತೃತೀಯ ಸ್ಥಾನ, ಗೋಳಿಯಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿನಾಯಕ ಚತುರ್ಥ ಸ್ಥಾನ ಹಾಗೂ ಬ್ರಹ್ಮಾವರದ ಎಸ್,ಎಮ್,ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಐದನೇಯ ಸ್ಥಾನ ಪಡೆದರು. ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಇದರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳಿಂದ ಆಗಮಿಸಿರುವ ರಾಜ್ಯಶಾಸ್ತ್ರ ಉಪನ್ಯಾಸಕರು,ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.
ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಉದಯ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ ವಂದಿಸಿದರು.











