ಕುಂದಾಪುರ ಮಿರರ್ ಸುದ್ದಿ
ಕುಂದಾಪುರ: ಹಿರಿಯ ಪತ್ರಕರ್ತ, ಕುಂದಪ್ರಭ ಸಂಪಾದಕ ಯು. ಎಸ್. ಶೆಣೈ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪಿ.ಆರ್. ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಜರುಗಿದ ರಾಜ್ಯ ಮಟ್ಟದ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಎಂಎಲ್‍ಸಿ ಆಯನೂರು ಮಂಜುನಾಥ, ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ಏಷ್ಯಾ ವಿಭಾಗದ ಸಂಚಾಲಕ ಎಚ್. ಬಿ. ಮದನಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಎನ್. ರವಿಕುಮಾರ್, ಕರ್ನಾಟಕ ಕಾರ್ಯನಿರ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಜೆ.ಸಿ ಲೋಕೇಶ್, ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ನವಭಾರತ ಪತ್ರಿಕೆಯ ಮೂಲಕ ವೃತ್ತಿ ಜೀವನ ಆರಂಭಿಸಿ ಯು.ಎಸ್. ಶೆಣೈ ಅವರು ಇಂಡಿಯನ್ ಎಕ್ಸ್‍ಪ್ರೆಸ್, ಮುಂಗಾರು, ಹೊಸದಿಗಂತ, ಪ್ರಜಾಪ್ರಭುತ್ವ, ಟೈಮ್ಸ್ ಆಫ್ ಡೆಕ್ಕನ್ ಮೊದಲಾದ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಆರಂಭಿಸಿ ವಾರಪತ್ರಿಕೆ ಮೂರು ದಶಕ ಕಂಡು ಮುನ್ನಡೆಯುತ್ತಿದೆ.











