ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 2023- 24 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ಹಾಗೂ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿಯಾಗಿರುವ ಸುದೀಪ್ ಶೆಟ್ಟಿ ಉದ್ಘಾಟಿಸಿ, ಕ್ರೀಡೆ ವಿದ್ಯಾರ್ಥಿಗಳನ್ನು ದೈಹಿಕವಾಗಿ, ಮಾನಸಿಕವಾಗಿ ಸದೃಢವನ್ನಾಗಿಸುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಕ್ರೀಡೆ ಅವಶ್ಯಕ ಎಂದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ
ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಲಕ್ಷ್ಮೀಶ್ ಸ್ವಾಗತಿಸಿದರು. ನಿಶಾಲ್ ವಂದಿಸಿ, ರಝೀನಾ ಭಾನು ಅತಿಥಿಯನ್ನು ಪರಿಚಯಿಸಿದರು , ಸಾನಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.











