ಕುಂದಾಪುರ ಮಿರರ್ ಸುದ್ದಿ…

ವಂಡ್ಸೆ :ಕುಂದಾಪುರ ಅಭಿವೃದ್ದಿ ಎನ್ನುವುದು ಗ್ರಾಮಗಳಿಂದ ಆರಂಭವಾಗುತ್ತದೆ. ಗ್ರಾಮ ಪಂಚಾಯಿತಿಗಳಿಗೆ ಉತ್ತಮ ಕಟ್ಟಡವಿರಬೇಕು. ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಎಲ್ಲ ಗ್ರಾಮ ಪಂಚಾಯತ್‍ಗಳು ಅಭಿವೃದ್ದಿಯಾಗಬೇಕು ಎನ್ನುವುದು ನನ್ನ ಯೋಚನೆ. ಗ್ರಾಮದ ಬಗ್ಗೆ ದೂರದೃಷ್ಟಿಯ ಚಿಂತನೆಯೊಂದಿಗೆ ಸರಕಾರಿ ಕಟ್ಟಡಗಳ ನಿರ್ಮಿಸುವುದು ಹೆಚ್ಚು ಸೂಕ್ತ. ಯೋಜನೆಗಳು ಭವಿಷ್ಯದ ದೂರದೃಷ್ಟಿ ಹೊಂದಿರಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು.
ನೂಜಾಡಿ ಕ್ರಾಸ್ ಸಮೀಪದ ಸರಕಾರಿ ಕಚೇರಿಗಳ ಸಂಕೀರ್ಣದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿನ ನೂತನ ಕಛೇರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಹೋಬಳಿ ಕೇಂದ್ರವಾಗಿರುವ ವಂಡ್ಸೆಯಲ್ಲಿ ಎಲ್ಲ ಸರ್ಕಾರಿ ಕಛೇರಿಗಳನ್ನು ಒಂದೇ ಕಡೆ ನಿರ್ಮಿಸುವ ಸಲುವಾಗಿ ಸ್ಥಳ ಕಾದಿರಿಸಲಾಗಿದೆ. ವಂಡ್ಸೆ ಗ್ರಾಮದ ಭವಿಷ್ಯದ ದೂರದೃಷ್ಟಿಯ ಯೋಜನೆ ಇದಾಗಿದೆ. ಈಗಾಗಲೇ ಪಶು ಚಿಕಿತ್ಸಾಲಯ, ರೈತ ಸಂಪರ್ಕ ಕೇಂದ್ರ, ಸಭಾಭವನ ನಿರ್ಮಾಣವಾಗಿದೆ. ಗ್ರಾಮ ಪಂಚಾಯಿತಿ ಕಟ್ಟಡವನ್ನು ಇಲ್ಲಿ ನಿರ್ಮಿಸುವ ಸಲುವಾಗಿ ಯೋಜನೆ ಸಿದ್ಧಪಡಿಸಲಾಗಿದೆ. ಸುಮಾರು 4 ಸಾವಿರ ಚದರ ಅಡಿಯ ಕಟ್ಟಡವನ್ನು ಸುಮಾರು 1.21ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲನಕ್ಷೆ ತಯಾರಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಶಾಂತ್ ವಂಡ್ಸೆ, ಶಶಿಕಲಾ ವಂಡ್ಸೆ, ಸುಬ್ಬು, ಸುಶೀಲ, ಜಿ.ಪಂ ಮಾಜಿ ಸದಸ್ಯ ಎಚ್.ಮಂಜಯ್ಯ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಉದಯ ಜಿ.ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಚಿತ್ತೂರು ಗ್ರಾ.ಪಂ ಅಧ್ಯಕ್ಷ ರವಿರಾಜ ಶೆಟ್ಟಿ, ನಿವೃತ್ತ ಬಿ.ಎಸ್.ಎನ್.ಎಲ್ ಅಧಿಕಾರಿ ಜಿ.ಶ್ರೀಧರ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಶಶಿಧರ ಶೆಟ್ಟಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಆಶಾ, ವಿಕಲಚೇತನ ಇಲಾಖೆಯ ರಂಜಿತ್, ಉದ್ಯಮಿ ರಮೇಶ ದೇವಾಡಿಗ ಅಡಿಕೆಕೊಡ್ಲು, ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ಗೋಪಾಲ ಶೆಟ್ಟಿ ಕೊಳ್ತ, ಸುಧೀರ್ ಕುಮಾರ್ ಶೆಟ್ಟಿ, ನಿರ್ಮಲ ಶೆಟ್ಟಿ ವಂಡ್ಸೆ, ವೆಂಕಟೇಶ್ ಶೆಟ್ಟಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ರಫೀಕ್ ಸಾಹೇಬ್, ಅನಿಲ್ ಶೆಟ್ಟಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಶೇಟ್ ಸ್ವಾಗತಿಸಿದರು. ಉಪಾಧ್ಯಕ್ಷ ಗೋವರ್ಧನ್ ಜೋಗಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.











